Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಭ್ರಷ್ಟಾಚಾರ ಆರೋಪ ಬಿಜೆಪಿ ವರ್ಚಸ್ಸಿಗೆ ಧಕ್ಕೆ,ಆಂತರಿಕ ಲೋಕಪಾಲ್ ರಚಿಸಿ

shanta-kumar_ನವದೆಹಲಿ: ಸಂಸತ್ ಮುಂಗಾರು ಅಧಿವೇಶನದಲ್ಲಿ ವಿರೋಧಪಕ್ಷಗಳು ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣದ ಕುರಿತು ಕೋಲಾಹಲವೆಬ್ಬಿಸುವುದನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಜ್ಜಾಗುತ್ತಿದ್ದರೆ, ಮತ್ತೊಂದೆಡೆ ಭ್ರಷ್ಟಾಚಾರ ಪ್ರಕರಣಗಳನ್ನು ಹತ್ತಿಕ್ಕಲು ಪಕ್ಷದೊಳಗೆ ಲೋಕ್ ಪಾಲ್ ರಚಿಸಬೇಕೆಂದು ಹಿಮಾಚಲ ಪ್ರದೇಶದ ಬಿಜೆಪಿ ಹಿರಿಯ ಮುಖಂಡ ಶಾಂತಾ ಕುಮಾರ್ ಪತ್ರ ಮುಖೇನ ಬಾಂಬ್ ವೊಂದನ್ನು ಸಿಡಿಸಿದ್ದಾರೆ.

ಮಂಗಳವಾರದ ಮಾಧ್ಯಮಗಳ ವರದಿ ಪ್ರಕಾರ, ಕಾಂಗ್ರಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶಾಂತಾ ಕುಮಾರ್, ಪಕ್ಷದೊಳಗೆ ಇತ್ತೀಚೆಗೆ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪಗಳ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಈ ಹಗರಣಗಳಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಬಂದಿರುವುದಾಗಿ ದೂರಿದ್ದಾರೆ.

ಭ್ರಷ್ಟಾಚಾರವನ್ನು ಕಿತ್ತೊಗೆಯುವ ನಿಟ್ಟಿನಲ್ಲಿ ಲೋಕ್ ಪಾಲ್ ದಂತೆ ಪಕ್ಷದೊಳಗೆ ನೈತಿಕ ಸಮಿತಿಯನ್ನು ರಚಿಸಬೇಕೆಂದು ಕುಮಾರ್ ಪತ್ರದಲ್ಲಿ ಆಗ್ರಹಿಸಿದ್ದಾರೆ. ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ನಡೆದಿರುವ ವ್ಯಾಪಂ ಹಗರಣದಿಂದಾಗಿ ಎಲ್ಲರೂ ನಾಚಿಕೆಯಿಂದ ತಲೆತಗ್ಗಿಸುವಂತಾಗಿದೆ ಎಂದು ತಿಳಿಸಿದ್ದಾರೆ.

ಲಲಿತ್ ಮೋದಿ ವಿವಾದದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಭಾಗಿಯಾಗಿದ್ದಾರೆನ್ನಲಾಗಿದೆ.
ಮಹಾರಾಷ್ಟ್ರದ ಮೂರು ಮುಖಂಡರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ ಎಂದು ಪತ್ರದಲ್ಲಿ ವಿವರಿಸಿರುವ ಶಾಂತಾ ಕುಮಾರ್, ಹಾಗಾಗಿ ಬಿಜೆಪಿ ನೇತೃತ್ವದ ಸರ್ಕಾರಗಳಲ್ಲಿ ಈ ಮುಖಂಡರ ಭಾಗಿಯಾಗಿದ್ದಾರೆನ್ನಲಾದ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಲು ಆಂತರಿಕ ಲೋಕ್ ಪಾಲ್ ಅಗತ್ಯ ಇದೆ ಎಂದು ಪ್ರತಿಪಾದಿಸಿದ್ದಾರೆ.

No Comments

Leave A Comment