Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಮುಂಬೈನಲ್ಲಿ ಮತ್ತೆ ವರುಣನ ಆರ್ಭಟ; ಜನಜೀವನ ಅಸ್ತವ್ಯಸ್ತ, ರೈಲು ಸ್ಥಗಿತ

mumbaiಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕಳೆದ ರಾತ್ರಿಯಿಂದ  ಸುರಿಯುತ್ತಿರುವ ಧಾರಾಕಾರ ಮಳೆಗೆ ಮತ್ತೆ ಜನಜೀವನ (ಸುಮಾರು 16ಮಿ.ಮೀಟರ್) ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ರೈಲು ಸಂಚಾರ ಸ್ಥಗಿತಗೊಂಡಿದೆ.

ಸಮುದ್ರದಲ್ಲಿ ಮಂಗಳವಾರ ಮಧ್ಯಾಹ್ನ 3.98 ಮೀಟರ್ ಎತ್ತರದ ಭಾರೀ ಗಾತ್ರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಮುಂಬೈ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಥಾಣೆ ಪ್ರದೇಶ ಸಂಪೂರ್ಣ ನೀರಿನಿಂದ ಆವೃತವಾಗಿದೆ ಎಂದು ವರದಿ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಮುಂಬೈನಲ್ಲಿ 15.8 ಮಿ.ಮೀ. ಮಳೆಯಾಗಿದೆ. ಸಾಂತಾಕ್ರೂಜ್ ನಲ್ಲಿ ದಾಖಲೆಯ 61ಮಿ.ಮೀ. ಮಳೆಯಾಗಿದೆ ಎಂದು ವರದಿ ವಿವರಿಸಿದೆ.

ಭಾರೀ ಮಳೆಯಿಂದಾಗಿ ಜಲಾವೃತಗೊಂಡಿರುವುದರಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರು ಮುಂಚಿತವಾಗಿ ಹೊರಡುವ ಮೂಲಕ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಬೇಕೆಂದು ಸಾರಿಗೆ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

ಬಾಂದ್ರಾದಲ್ಲಿ ಬೆಳಗ್ಗೆ ಫೂಟ್ ವೇರ್ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಪಿಟಿಐ ವರದಿ ಮಾಡಿದೆ. ಆದರೆ ಅಗ್ನಿ ಅನಾಹುತದಲ್ಲಿ ಯಾರಿಗೂ ಹಾನಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹೇಳಿದ್ದಾರೆ.

No Comments

Leave A Comment