Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಲೋಕಾ ಭ್ರಷ್ಟಾಚಾರ ಕೇಸ್; ಎಸ್ ಐಟಿಯಿಂದ ಮತ್ತಿಬ್ಬರು ಅರೆಸ್ಟ್

6arresteಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಕಮಲ್ ಪಂಥ್ ನೇತೃತ್ವದ ವಿಶೇಷ ತನಿಖಾ ತಂಡ ಬುಧವಾರ ಮತ್ತಿಬ್ಬರನ್ನು ಬಂಧಿಸಿದೆ. ಇಬ್ಬರನ್ನೂ ಎಸ್ ಐಟಿ ಅಧಿಕಾರಿಗಳು ಲೋಕಾಯುಕ್ತ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ನಿನ್ನೆ ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ಅವರ ಆಪ್ತ ಅಶೋಕ್ ಕುಮಾರ್ (30ವರ್ವ) ಎಂಬಾತನನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದರು. ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಇಂದು ಅಶೋಕ್ ಕುಮಾರ್ ಸಹಚರರಾದ ಶ್ರೀನಿವಾಸ್ ಗೌಡ ಮತ್ತು ಶಂಕರೇಗೌಡ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಶನಿವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಲೋಕಾಯುಕ್ತ ನ್ಯಾ.ವೈ.ಭಾಸ್ಕರ ರಾವ್ ಅವರ ಪುತ್ರ ಅಶ್ವಿನ್ ರಾವ್ ಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಶ್ವಿನ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

No Comments

Leave A Comment