Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಪಕ್ಷ ವಿರೋಧಿ ಆರೋಪ; ಕಾಂಗ್ರೆಸ್ ನಿಂದ ಶಾಸಕ ನಡಹಳ್ಳಿ ಉಚ್ಚಾಟನೆ

as-nadahalli-33ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ದೇವರಹಿಪ್ಪರಗಿ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿಯನ್ನು ಎಕೆ ಆಂಟನಿ ನೇತೃತ್ವದ ಶಿಸ್ತು ಪಾಲನಾ ಸಮಿತಿ ಪಕ್ಷದಿಂದ ಉಚ್ಚಾಟಿಸಿ ಶಿಫಾರಸು ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉತ್ತರಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಕಾಂಗ್ರೆಸ್ ವಿರುದ್ಧವೇ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದರಿಂದಾಗಿ ಕಾಂಗ್ರೆಸ್ ಶಾಸಕ ಎ.ಎಎಸ್ ಪಾಟೀಲ್ ನಡಹಳ್ಳಿಯನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಕೆಪಿಸಿಸಿ ಎಐಸಿಸಿಗೆ ಶಿಫಾರಸು ಮಾಡಿತ್ತು.

ಇದೀಗ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಎಎಎಸ್ ಪಾಟೀಲ್ ನಡಹಳ್ಳಿಯನ್ನು ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನದಿಂದ ಉಚ್ಚಾಟಿಸುವಂತೆ ಎಕೆ ಆಂಟನಿ ನೇತೃತ್ವದ ಶಿಸ್ತು ಪಾಲನಾ ಸಮಿತಿ ಕೆಪಿಸಿಸಿಗೆ ಶಿಫಾರಸು ಮಾಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

No Comments

Leave A Comment