Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಪಾಸ್ಪೋರ್ಟ್ ಕೋರಿ ಕಾಂಗ್ರೆಸ್ ಒತ್ತಡ: ಸುಷ್ಮಾ ಸ್ವರಾಜ್ ಟ್ವಿಟ್ ಕಾಂಗ್ರೆಸ್ ಪ್ರತಿಭಟನೆ ಮುಂದೂಡಿಕೆ

soniನವದೆಹಲಿ(ಐಎಎನ್ಎಸ್): ಲಲಿತ್ ಮೋದಿ ಹಾಗೂ ವ್ಯಾಪಂ ಹಗರಣ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್, ಬಿಜೆಪಿ ವಿರುದ್ಧ ಬುಧವಾರ ಸಂಸತ್ ಹೊರಗೆ ನಡೆಸಲು ಉದ್ದೇಶಿಸಿದ್ದ ಶಾಂತಿಯುತ ಪ್ರತಿಭಟನೆಯನ್ನು ಸುಷ್ಮಾ ಸ್ವರಾಜ್ ಅವರಿಂದ ಟ್ವಿಟ್ ಬಂದ ನಂತರ ಮುಂದೂಡಿದೆ.

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂದಿ ಅವರ ನೇತೃತ್ವದಲ್ಲಿ ಸಂಸತ್ ನ ಹೊರಗೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಂದ, ‘ಕಲ್ಲಿದ್ದಲು ಹಗರಣ ಆರೋಪಿ ವ್ಯಕ್ತಿಗೆ ರಾಜತಾಂತ್ರಿಕ ಪಾಸ್ಪೋರ್ಟ್ ಕೋರಿ ಕಾಂಗ್ರೆಸ್ ನಾಯಕರೊಬ್ಬರಿಂದ ಒತ್ತಡ ಬಂದಿತ್ತು’ ಎಂದು ಟ್ವಿಟ್ ಬಂದ ನಂತರ ಪ್ರತಿಭಟನೆಯನ್ನು ಮುಂದೂಡಲಾಯಿತು ಎನ್ನಲಾಗಿದೆ.

ಸದನದಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ವೀರಪ್ಪ ಮೊಯಿಲಿ ಅವರು ಲಲಿತ್ ಮೋದಿ ಹಾಗೂ ವ್ಯಾಪಂ ಹಗರಣ ಪ್ರಕರಣಗಳನ್ನು ಮುಂದಿಟ್ಟು, ಪ್ರಕರಣ ಆರೋಪಿಗಳ ರಾಜೀನಾಮೆಗೆ ಆಗ್ರಹಿಸಿದರು.

No Comments

Leave A Comment