Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ರೈತರ ಆತ್ಮಹತ್ಯೆ, ಲೋಕಾ ಭ್ರಷ್ಟಾಚಾರ: ದೇವೇಗೌಡರಿಂದ ರಾಜ್ಯಪಾಲರ ಭೇಟಿ

devegowdaಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಮಧ್ಯಾಹ್ನ ರಾಜ್ಯಪಾಲರನ್ನು ಭೇಟಿ ಮಾಡಿದ ದೇವೇಗೌಡರು, ರಾಜ್ಯದಲ್ಲಿ ಮುಂದುವರೆದ ರೈತರ ಸರಣಿ ಆತ್ಮಹತ್ಯೆ, ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಬಿಬಿಎಂಪಿ ವಿಭಜನೆ ಸಂಬಂಧ ಸರ್ಕಾರ ಅಂಗೀಕರಿಸಿರುವ ನಗರಾಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಸಹಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಬಿಬಿಎಂಪಿ ವಿಭಜನೆಗೆ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿದ್ದ ಉಭಯ ಪಕ್ಷಗಳು, ಕರ್ನಾಟಕ ನಗರಾಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಸಹಿ ಹಾಕದಂತೆ ಮನವಿ ಮಾಡಿದ್ದವು.

No Comments

Leave A Comment