Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ತೀಸ್ತಾಗೆ ‘ಹೈ’ ರಿಲೀಫ್, ಮಧ್ಯಂತರ ಜಾಮೀನು ಅವಧಿ 2 ವಾರ ವಿಸ್ತರಣೆ

teestaಮುಂಬೈ: ವಿದೇಶಿ ಮೂಲಗಳಿಂದ ಅಕ್ರಮವಾಗಿ ದೇಣಿಗೆ ಪಡೆದ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ವಜಾಗೊಳಿಸಿದ ಬೆನ್ನಲ್ಲೇ ಬಾಂಬ್ ಹೈಕೋರ್ಟ್ ಅವರ ಮಧ್ಯಂತರ ಜಾಮೀನು ಅವಧಿಯನ್ನು ಎರಡು ವಾರಗಳ ಕಾಲ ವಿಸ್ತರಿಸಿದೆ.ಹೀಗಾಗಿ ತೀಸ್ತಾ ಸದ್ಯ ಬಂಧನ ಭೀತಿಯಿಂದ ಪಾರಾಗಿದ್ದಾರೆ.

ತೀಸ್ತಾ ಹಾಗೂ ಅವರ ಪತಿ ಜಾವೇದ್ ಆನಂದ್ ಜುಲೈ 17ರಂದು ನಿರೀಕ್ಷಣಾ ಜಾಮೀನು ಕೋರಿ ಸಿಬಿಐ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಸಿಬಿಐ ಕೋರ್ಟ್ ವಿಶೇಷ ನ್ಯಾಯಾಧೀಶ ಅನಿಸ್ ಖಾನ್ ಅವರು ಇಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿಸಿದ್ದರು. ಆದರೆ ತೀಸ್ತಾ ಪರ ವಕೀಲರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಕೋರ್ಟ್, ತೀಸ್ತಾ ಹಾಗೂ ಅವರ ಪತಿ ಜಾವೇದ್ ಆನಂದ್ ಮಧ್ಯಂತರ ಜಾಮೀನು ಅವಧಿಯನ್ನು 2 ವಾರಗಳ ಕಾಲ ವಿಸ್ತರಣೆ ಮಾಡಿದೆ.

ಸ್ವಯಂ ಸೇವಾ ಸಂಸ್ಥೆ ನಡೆಸುತ್ತಿರುವ ತೀಸ್ತಾ ಸೆಟಲ್ವಾಡ್ ಅವರು ವಿದೇಶಿ ಮೂಲಗಳಿಂದ ಅಕ್ರಮವಾಗಿ ದೇಣಿಗೆ ಪಡೆದಿರುವ ಆರೋಪ ಎದುರಿಸುತ್ತಿದ್ದು, ಅವರ ವಿರುದ್ಧ (ಎಫ್ ಇಆರ್ ಎ) ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಸಿಬಿಐ ಅಧಿಕಾರಿಗಳು, ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ಗುಜರಾತ್ ಗಲಭೆ ಸಂತ್ರಸ್ತರ ಪರಿಹಾರ ನಿಧಿಯನ್ನು ತೀಸ್ತಾ ಮತ್ತು ಪತಿ ಐಶಾರಾಮಿ ಜೀವನ ನಡೆಸಲು ಬಳಸಿಕೊಂಡಿದ್ದು, ಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಗುಜರಾತ್ ಪೊಲೀಸರು ಮೊನ್ನೆಯಷ್ಟೇ ಸುಪ್ರೀಂಕೋರ್ಟ್ ಗೆ ವರದಿ ನೀಡಿದ್ದರು

No Comments

Leave A Comment