Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ವಾಮನ ಆಚಾರ್ಯ ರಾಜೀನಾಮೆ?

NEWSಬೆಂಗಳೂರು:ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ವಾಮನ ಆಚಾರ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ.

ವಾಮನ ಆಚಾರ್ಯ ಅವರು ಈ ಬಗ್ಗೆ ಅಧಿಕೃತ ಹೇಳಿಕೆ ಕೊಟ್ಟಿಲ್ಲ, ಕೆಲವು ಮೂಲಗಳ ಪ್ರಕಾರ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಜೀನಾಮೆ ನೀಡಿದ್ದಾರೆಂದು ಹೇಳಲಾಗಿದೆ.

ಹೈಕೋರ್ಟ್ ನಿರ್ದೇಶನದಂತೆ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ವಾಮನ ಆಚಾರ್ಯ ಅವರನ್ನು ಅಭಿಯೋಜನೆಗೆ ಒಳಪಡಿಸಲು ಸರ್ಕಾರ ಸಮ್ಮತಿಸಿತ್ತು. ಜಿ.ನಂಜಪ್ಪ ಅವರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ರಾಜ್ಯ ಪರಿಸರ ಇಲಾಖೆ ಮೇ 2ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 19ರ ಅನ್ವಯ ಆಚಾರ್ಯ ವಿರುದ್ಧ ವಿಚಾರಣೆಗೆ ಅನುಮತಿ ಮಂಜೂರು ಮಾಡಿತ್ತು. ಇದೀಗ ವಾಮನ ಆಚಾರ್ಯ ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆಂಬುದು ಇನ್ನಷ್ಟೇ ಅಧಿಕೃತವಾಗಿ ತಿಳಿದು ಬರಬೇಕಾಗಿದೆ.

No Comments

Leave A Comment