Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಗಲ್ಲು ವಿನಾಯ್ತಿ: 27ಕ್ಕೆ ಸುಪ್ರೀಂ ವಿಚಾರಣೆ

2mನವದೆಹಲಿ(ಪಿಟಿಐ): 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್‌ ಮೆಮನ್‌ ಗಲ್ಲು ಶಿಕ್ಷೆಯಿಂದ ವಿನಾಯ್ತಿ ಕೋರಿ ಮತ್ತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ.

ಮೆಮನ್‌ ಶಿಕ್ಷೆಯಿಂದ ವಿನಾಯ್ತಿ ಕೋರಿ ಸಲ್ಲಿಸಿದ್ದ ಎರಡನೇ ಪುನರ್‌ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್‌ ಮಂಗಳವಾರ ವಜಾಗೊಳಿಸಿತ್ತು.

ಅರ್ಜಿ ವಜಾಗೊಂಡ ಬಳಿಕ ಮೆಮನ್‌ ಕೊನೆಯ ಯತ್ನವಾಗಿ ನಾಗಪುರ ಕಾರಾಗೃಹದ ಅಧಿಕಾರಿಗಳ ಮೂಲಕ ಮಹಾರಾಷ್ಟ್ರ ರಾಜ್ಯಪಾಲರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ವೃತ್ತಿಯಲ್ಲಿ ಚಾರ್ಟೆಡ್‌ ಅಕೌಂಟೆಂಟ್‌ ಆದ 53 ವರ್ಷದ ಮೆಮನ್‌ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿಗಳು ಇತ್ತೀಚೆಗೆ ತಿರಸ್ಕರಿಸಿದ್ದರು.

ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾದ ಏಕೈಕ ವ್ಯಕ್ತಿಯಾಗಿರುವ ಮೆಮನ್‌ನನ್ನು ಜುಲೈ 30ರಂದು ಬೆಳಿಗ್ಗೆ 7ಕ್ಕೆ ನಾಗಪುರ ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸಿದೆ

No Comments

Leave A Comment