Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಅತ್ಯಾಚಾರ ಯತ್ನ:ಗ್ರಾ.ಪಂ.ಉಪಾಧ್ಯಕ್ಷನ ಸೆರೆಗೆ ಆಗ್ರಹಿಸಿ ಪ್ರತಿಭಟನೆ

1_1ಶಂಕರನಾರಾಯಣ : ಇಲ್ಲಿನ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿರುವ ಎಡಮೊಗೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಬಾಲಚಂದ್ರ ಕುಲಾಲ್‌ನ ಬಂಧನಕ್ಕೆ ಆಗ್ರಹಿಸಿ ಶಂಕರನಾರಾಯಣದಲ್ಲಿ  ಶುಕ್ರವಾರ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. 

ಬಿಜೆಪಿ ಯುವಮೋರ್ಚಾ, ರಾಜ್ಯ ಕಾರ್ಮಿಕ ಘಟಕ ಮತ್ತು ವಿವಿಧ ಸಂಘಟನೆಗಳ ಸದಸ್ಯರು ಎಡಮೊಗೆ ಪಂಚಾಯತ್‌ ಎದುರು ಪ್ರತಿಭಟನೆ ನಡೆಸಿ ಬಾಲಚಂದ್ರ ಕುಲಾಲ್‌ನ ಪಂಚಾಯತ್‌ ಸದಸ್ಯತ್ವ ರದ್ದು  ಮಾಡಿ ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.

ಶಂಕರನಾರಾಯಣ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಅರ್ಧ ಗಂಟೆ ರಜ್ಯ ಹೆದ್ದಾರಿಯನ್ನು ಬಂದ್‌ ಮಾಡಿದರು . ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಬೆಂಬಲ ನೀಡಿತ್ತು.

ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಶಂಕರನಾರಾಯಾಣ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು.

No Comments

Leave A Comment