Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಆಮ್ನೆಸ್ಟಿ ಕಚೇರಿಗೆ ಎಬಿವಿಪಿ ಮುತ್ತಿಗೆಗೆ ಯತ್ನ:ಮತ್ತೆ ಲಾಠಿ ಚಾರ್ಜ್

17BNP17ಬೆಂಗಳೂರು:ಭಾರತೀಯ ಸೈನ್ಯದ ವಿರುದ್ಧ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಕಾರ್ಯಕರ್ತರು ಶುಕ್ರವಾರವೂ ಪ್ರತಿಭಟನೆಯನ್ನು ಮುಂದುವರಿಸಿದ್ದು, ಇಂದಿರಾನಗರದಲ್ಲಿರುವ ಆಮ್ನೆಸ್ಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಸ್ಥಳಲ್ಲಿದ್ದ ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಚಾರ್ಜ್‌ ನಡೆಸಿ, 70ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿದ ಪರಿಣಾಮ ಹಲವು ವಿದ್ಯಾರ್ಥಿಗಳ ಮೈಗೆ ಗಾಯವಾಗಿ ರಕ್ತಸೋರುತ್ತಿತ್ತು. ವೀಣಾ ಎಂಬ ಓರ್ವ ವಿದ್ಯಾರ್ಥಿನಿ ಮತ್ತು ನಾಲ್ವರು ವಿದ್ಯಾರ್ಥಿಗಳು ಲಾಠಿ ಏಟಿನಿಂದ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.abvp_protest

ಆಮ್ನೆಸ್ಟಿ ಕಚೇರಿಗೆ ಮುತ್ತಿಗೆ ಹಾಕುವುದನ್ನು ತಡೆಯಲು ಪೊಲೀಸರು ಹರಸಾಹಸಪಟ್ಟರು ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ ಅನ್ನು ತಳ್ಳಿ ಒಳನುಗ್ಗಲು ಪ್ರಯತ್ನಿಸಿದಾಗ ಲಾಠಿ ಚಾರ್ಜ್‌ ನಡೆಸಿದರು.

ಭಾರತೀಯ ಸೈನ್ಯದ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ಆಮ್ನೆಸ್ಟಿ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗಿತ್ತು. ಆ ನಿಟ್ಟಿನಲ್ಲಿ ಆಮ್ನೆಸ್ಟಿ ಕಚೇರಿಯನ್ನು ಬಂದ್ ಮಾಡುವಂತೆ ಹಾಗೂ ಘೋಷಣೆ ಕೂಗಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಎಬಿವಿಪಿ ಭಾನುವಾರದಿಂದ ಪ್ರತಿಭಟನೆ ನಡೆಸುತ್ತಿದೆ.

No Comments

Leave A Comment