Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಪ್ರವೀಣ್‌ ಪೂಜಾರಿ ಹತ್ಯೆ ಖಂಡಿಸಿ ಸಿಪಿಎಂನಿಂದ ಪ್ರತಿಭಟನೆ- ‘ದನ ಸಾಕುವವರೇ ನಿಜವಾದ ಗೋರಕ್ಷಕರು’

19udp-protestಉಡುಪಿ:  ಪ್ರವೀಣ್‌ ಪೂಜಾರಿ ಅವರ ಹತ್ಯೆಯನ್ನು ಖಂಡಿಸಿ ಭಾರತೀಯ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)ದ ಸದಸ್ಯರು ನಗರದ ಸರ್ವಿಸ್‌ ಬಸ್‌ ನಿಲ್ದಾ ಣದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಗೋ ರಕ್ಷಣೆಯ ಹೆಸರಿನಲ್ಲಿ ಅಮಾ ಯಕ ಪ್ರವೀಣ್‌ ಪೂಜಾರಿ ಅವರನ್ನು ಹತ್ಯೆ ಮಾಡಿರುವುದು ಹೇಯ ಕೃತ್ಯ. ಗೋ ರಕ್ಷಣೆಯ ಹೆಸರಿನಲ್ಲಿ ಅಲ್ಪಸಂ ಖ್ಯಾತರು, ದಲಿತರ ಮೇಲೆ ನಡೆಯುತ್ತಿದ್ದ ಹಲ್ಲೆ, ಈಗ ಹಿಂದುಳಿದ ಬಡವರ ಮೇಲೂ ಆರಂಭವಾಗಿದೆ. ಸರ್ಕಾರ ಮತ್ತು ಪೊಲೀಸ್‌ ಇಲಾಖೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಇಂತಹ ಘಟನೆಗಳು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಗಳಿವೆ. ಹಾಗಾಗಿ ಪ್ರವೀಣ್‌ ಪೂಜಾರಿ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರ ವಾಗಿ ಪರಿಗಣಿಸಬೇಕು. ಪ್ರವೀಣ್‌ ಕುಟುಂಬಕ್ಕೆ ₹10ಲಕ್ಷ ಪರಿಹಾರ ಒದಗಿ ಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಶಂಕರ್‌ ಮಾತ ನಾಡಿ, ಗೋ ರಕ್ಷಣೆಯ ಹೆಸರಿನಲ್ಲಿ ಮನುಷ್ಯರನ್ನು ಕೊಲೆ ಮಾಡುವ ಅಮಾ ನುಷ ಕೃತ್ಯ ನಡೆಯುತ್ತಿದ್ದರೂ ಸಹ ಸರ್ಕಾರ ಮಾತ್ರ, ಇಂತಹ ಹೇಯ ಕೃತ್ಯಗ ಳನ್ನು ನಿಯಂತ್ರಿಸಲು ಯಾವುದೇ ಕ್ರಮಕೈ ಗೊಳ್ಳುತ್ತಿಲ್ಲ. ಹಾಗಾಗಿ ಕೊಲೆಗಡುಕರು ಕಾನೂನಿನ ಯಾವುದೇ ಭಯವಿಲ್ಲದೆ, ಧೈರ್ಯದಿಂದ ಇಂತಹ ಅಮಾನವೀಯ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಕೃತ್ಯಗಳು ಆಗದಂತೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ನೋಡಿಕೊಳ್ಳ ಬೇಕು ಎಂದು ಆಗ್ರಹಿಸಿದರು.   
ಮನೆಗಳಲ್ಲಿ ಮಮತೆಯಿಂದ ದನಗ ಳನ್ನು ಸಾಕುವವರು ಮಾತ್ರವೇ ನಿಜವಾದ ಗೋ ರಕ್ಷಕರು. ಅಮಾಯಕರ ಮೇಲೆ ಹಲ್ಲೆ ನಡೆಸುವವರು ನಕಲಿ ಗೋ ರಕ್ಷ ಕರು.

ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗು ತ್ತಿದೆ. ಜನಸಾಮಾನ್ಯರಿಗೆ ಸಾಮಾಜಿಕ ಅಭದ್ರತೆ ಕಾಡುತ್ತಿದೆ. ಇದರ ವಿರುದ್ಧ ಜನ ಜಾಗೃತರಾದಲ್ಲಿ ಮಾತ್ರ, ಇಂತಹ ಘಟನೆಗಳನ್ನು ನಿಯಂತ್ರಿಸಬಹುದು ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದರು.

ಪಕ್ಷದ ಮುಖಂಡರಾದ ವಿಶ್ವನಾಥ ರೈ, ಮಹಾಬಲ ವಡೇರಹೋಬಳಿ, ಎಚ್‌. ನರಸಿಂಹ, ಸುರೇಶ್‌ ಕಲ್ಲಾಗರ್‌, ಶೇಖರ್‌ ಬಂಗೇರ, ಕವಿರಾಜ್‌, ಸುಜಾತ, ನಳಿನಿ, ವಿಠಲ ಪೂಜಾರಿ ಇದ್ದರು.

No Comments

Leave A Comment