Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ-ಡಾ.ಪಾ.ವಿ ಭಟ್

DSC_0022ವಿದ್ಯಾಥಿಗಳು ಉತ್ತಮ ಲೇಖನವನ್ನು ಬರೆಯಲು ಉತ್ತಮ ಓದುಗನಾಗಬೇಕು. ಪ್ರತಿನಿತ್ಯ ಓದುವ ಹವ್ಯಾಸವನ್ನು ರೂಢಿಸಿಕೊಂಡಾಗ ವಿದ್ಯಾರ್ಥಿ ಅತ್ಯುತ್ತಮ ಬರಹಗಾರನಾಗಲು ಸಾಧ್ಯ ಎಂದು ಕನ್ನಡದ ಹಿರಿಯ ವಿದ್ವಾಂಸ ಡಾ. ಪಾದೆಕಲ್ಲು ವಿಷ್ಣುಭಟ್ ಹೇಳಿದರು.

ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆದ ಕಾಲೇಜಿನ ವಾರ್ಷಿಕ ಸಂಚಿಕೆ ಸನ್ಮತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಇಂದಿನ ಆಧುನಿಕ ಮಾಧ್ಯಮಗಳ ಪ್ರಭಾವದಿಂದ ವಿದ್ಯಾಥಿಗಳಲ್ಲಿ ಓದುವ ಹಾಗು ಬರೆಯುವ ಪ್ರವೃತ್ತಿ ಕುಂಠಿತಗೊಂಡಿರುವುದು ವಿಷಾದನೀಯ. ಆಧುನಿಕ ಮಾಧ್ಯಮಗಳನ್ನೇ ಬಳಸಿ ವಿದ್ಯಾರ್ಥಿಗಳು ಉತ್ತಮ ಬರಹಗಳನ್ನು ಬರೆಯಬಹುದು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕುಸುಮಾ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಎಂಜಿ‌ಎಂ ಪದವಿ ಪೂರ್ವ ಕಾಲೇಜಿನ ಪ್ರಾಶುಪಾಲೆ ಮಾಲತಿದೇವಿ ಉಪಸ್ಥಿತರಿದ್ದರು.

ಸನ್ಮತಿ ಸಂಪಾದಕ ಮಂಡಳಿಯ ಕಾರ್ಯನಿರ್ವಾಹಕ ಸಂಪಾದಕರಾದ ಡಾ.ಸಂಧ್ಯಾ ಆರ್ ನಂಬಿಯಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕನ್ನಡ ವಿಭಾಗ ಮುಖ್ಯಸ್ಥ ಡಾ.ಪುತ್ತಿ ವಸಂತ ಕುಮಾರ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

No Comments

Leave A Comment