Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಮೂವರು ಉಗ್ರರ ಹತ್ಯೆ

army-2ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ದಾಳಿ ನಡೆಸಿದ್ದ ಉಗ್ರರನ್ನು ಭಾರತೀಯ ಸೇನೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದೆ.

ಆ.21 ರಂದು ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಮೂವರು ಉಗ್ರರು ದಾಳಿ ನಡೆಸಿದ್ದರು. ಉಗ್ರರನ್ನು ಸದೆಬಡಿಯಲು ಭಾರತೀಯ ಸೇನೆ 4 ಪ್ಯಾರಾ ಕಮಾಂಡೋಗಳು ಕಾರ್ಯಾಚರಣೆ ನಡೆಸಿತ್ತು,. ಕಾರ್ಯಾಚರಣೆ ಅಂತ್ಯಗೊಂಡಿದ್ದು, ಮತ್ತಷ್ಟು ಉಗ್ರರು ಅಡಗಿರುವ ಶಂಕೆ ಇರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಕೆಲ ದಿನಗಳ ಹಿಂದಷ್ಟೇ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪವಿರುವ ನೌಗಮ್ ವಲಯದಲ್ಲಿ ಉಗ್ರರು ಭಾರತದ ಒಳನುಸುಳಲು ಯತ್ನಿಸಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ್ದ ಯೋಧರು ನಾಲ್ಕು ಮಂದಿ ಉಗ್ರನ್ನು ಹತ್ಯೆ ಮಾಡಿ ಓರ್ವ ಉಗ್ರನನ್ನು ಸೆರೆ ಹಿಡಿದಿದ್ದರು.

No Comments

Leave A Comment