Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಸ್ವಾತಂತ್ರ್ಯ ಸಂಗ್ರಾಮದಲ್ಲಿ RSS, BJP ಬ್ರಿಟಿಷರ ಜೊತೆಗಿದ್ರು; ರಮ್ಯಾ

ramya-birthday-ಮಂಡ್ಯ: ಇತ್ತೀಚೆಗಷ್ಟೇ ಪಾಕಿಸ್ತಾನ ನರಕವಲ್ಲ, ಮಂಗಳೂರು ನರಕ ಎಂದು ಹೇಳಿಕೆ ನೀಡಿ ತೀವ್ರ ಟೀಕೆಗೆ ಒಳಗಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ ಇದೀಗ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, ಆರ್ ಎಸ್ ಎಸ್ ಪಾತ್ರ ಏನೂ ಇಲ್ಲ ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ.

ಸ್ವಾತಂತ್ರ್ಯ ಹೋರಾಟ ಸಂಗ್ರಾಮದ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿಯವರು ಬ್ರಿಟಿಷರ ಜೊತೆ ಸೇರಿಕೊಂಡಿದ್ದರು ಎಂದು ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಬರಲು ಕಾಂಗ್ರೆಸ್ ಪಕ್ಷ ಕಾರಣ. ಬಿಜೆಪಿ, ಆರ್ ಎಸ್ ಎಸ್ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿಲ್ಲ ಎಂದು ಆರೋಪಿಸಿದರು.

No Comments

Leave A Comment