Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಮಂಡ್ಯ ನಗರ ಸಂಪೂರ್ಣ ಸ್ತಬ್ಧ; ಉರುಳು ಸೇವೆ, ಅರೆಬೆತ್ತಲೆ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ನೀರು ಬಿಡುವ ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಂಸದೆ ರಮ್ಯಾ, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌  ಭಾವಚಿತ್ರಗಳ ಕಟೌಟ್‌ಗಳನ್ನು ಕಿತ್ತು  ಬೆಂಕಿ ಹಚ್ಚಿದ್ದಾರೆ.

ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ ಸಿಕ್ಕ ರಾಜಕೀಯ ನಾಯಕರ ಪೋಸ್ಟರ್‌ಗಳನ್ನೆಲ್ಲ ಕಿತ್ತು ಸಂಜಯ ವೃತ್ತದಲ್ಲಿ ಉರಿಯುತ್ತಿದ್ದ ಬೆಂಕಿಗೆ ತಂದು ಹಾಕಿ ಕಾವೇರಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಲೋಕೋಪಯೋಗಿ ಇಲಾಖೆಯ ಹೂಕೂಂಡಗಳನ್ನು ಒಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ತಾಲ್ಲೂಕಿನ ಇಂಡುವಾಳು ಗ್ರಾಮದಲ್ಲಿ ಬೆಳಿಗ್ಗೆಯಿಂದಲೇ ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ಮಾಡಿದ್ದು,

ಭೂ ತನಹೊಸೂರು, ಗೆಜ್ಜಲಗೆರೆ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ರಸ್ತೆ ತಡೆ ಮಾಡಲಾಗಿದೆ.

ವಾಹನಗಳನ್ನು ತಡೆದದ್ದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ರೈಲು ಸಂಚಾರಕ್ಕೆ ವ್ಯತ್ಯಯವಾಗಿರಲಿಲ್ಲ. ಮಂಡ್ಯದಲ್ಲಿ ರೈಲ್ವೆ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ಕರವೇ ಕಾರ್ಯಕರ್ತರನ್ನು ಪೊಲೀಸರು ನಿಲ್ದಾಣದ ಹೊರಗಡೆಯೇ ತಡೆದಿದ್ದಾರೆ.

ಅಂಗಡಿ–ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಬಸ್‌ ರಸ್ತೆಗೆ ಇಳಿಯಲಿಲ್ಲ. ಪೆಟ್ರೋಲ್‌ ಬಂಕ್‌, ಚಿತ್ರಮಂದಿರಗಳೂ ಬಂದ್ ಆಗಿದ್ದವು. ಮಂಡ್ಯ ನಗರ ಸಂಪೂರ್ಣ ಸ್ತಬ್ಧವಾಗಿತ್ತು.

ಕನ್ನಡಪರ ಸಂಘಟನೆಯ ಇಬ್ಬರು ಕಾರ್ಯಕರ್ತರು ಮೈಮೇಲೆ ಸೀಮೆ ಎಣ್ಣೆ ಹಾಕಿಕೊಂಡು ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದನ್ನು ಪೊಲೀಸರು ಕೂಡಲೇ ತಡೆದರು. ಉರುಳು ಸೇವೆ, ಅರೆಬೆತ್ತಲೆ ಸೇರಿದಂತೆ ವಿವಿಧ ಬಗೆಯ ಪ್ರತಿಭಟನೆಗಳು ಇಲ್ಲಿ ನಡೆದಿವೆ.

No Comments

Leave A Comment