Log In
BREAKING NEWS >
ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ,ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು...

ಬಾಂಗ್ಲಾದಲ್ಲಿ ಭೀಕರ ಅಗ್ನಿ ದುರಂತ; 25 ಸಾವು, 70 ಮಂದಿಗೆ ಗಾಯ

bangladಢಾಕಾ: ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಗೊಂಡ ಪರಿಣಾಮ ಸಂಭವಿಸಿದ ಅಗ್ನಿ ದುರಂತದಲ್ಲಿ 25 ಮಂದಿ ಸಾವಿಗೀಡಾಗಿದ್ದಾರೆ.

ರಾಜಧಾನಿ ಢಾಕಾದ ಉತ್ತರ ಭಾಗದಲ್ಲಿರುವ ಟೊಂಗಿ ವಾಣಿಜ್ಯ ಪ್ರದೇಶದಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ನಿನ್ನೆ ತಡರಾತ್ರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಸುಮಾರು  100ಕ್ಕೂ ಅಧಿಕ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಅತಿಯಾದ ಒತ್ತಡದಿಂದಾಗಿ ಬಾಯ್ಲರ್ ಸ್ಫೋಟಗೊಂಡಿದ್ದು, ಈ ವೇಳೆ  ಹೊತ್ತಿಕೊಂಡ ಬೆಂಕಿಯಲ್ಲಿ ಸುಮಾರು 25ಕ್ಕೂ ಅಧಿಕ ಮಂದಿ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ.

ಮೂಲಗಳ ಪ್ರಕಾರ ಪ್ರಸ್ತುತ ಅಗ್ನಿ ಅವಘಡ ಸಂಭವಿಸಿರುವ ಕಾರ್ಖಾನೆಯಲ್ಲಿ ಹಲವು ಬಗೆಯ ರಾಸಾಯನಿಕಗಳನ್ನು ಶೇಖರಿಸಿಡಲಾಗಿತ್ತು. ಈ ವೇಳೆ ಶಂಕಿತ ಶಾರ್ಟ್ ಸರ್ಕ್ಯೂಟ್ ನಿಂದಾಗಿ  ಬೆಂಕಿ ತಗುಲಿದ್ದು, ಆರಂಭದಲ್ಲಿ ಬಾಯ್ಲರ್ ಕೊಠಡಿಗೆ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆ ನೋಡ ನೋಡುತ್ತಿದ್ದಂತೆಯೇ ಇಡೀ ಕಾರ್ಖಾನೆಯನ್ನು ಆವರಿಸಿತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.  ಪ್ರಕರಣ ದಾಖಲಿಸಿಕೊಂಡಿರುವ ಟೊಂಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment