Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಕಾಶ್ಮೀರದಲ್ಲಿ ಮತ್ತೆ ಉಗ್ರ ದಾಳಿ; ಓರ್ವ ಪೊಲೀಸ್ ಹುತಾತ್ಮ

kashmir-unrest-ptiಶ್ರೀನಗರ: ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವ ಬೆನ್ನಲ್ಲೇ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಓರ್ವ ಭದ್ರತಾ ಪಡೆಯ ಅಧಿಕಾರಿ ಉಗ್ರರ  ಗುಂಡೇಟಿಗೆ ಬಲಿಯಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ, ಬದಗಾಮ್, ಅನಂತ್ ನಾಗ್ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಭುಗಿಲೆದ್ದಿರುವ ಹಿಂಸಾಚಾರವನ್ನು ಶಮನಗೊಳಿಸಲು ಭಾರತೀಯ ಸೈನಿಕರು  ನಿರತರಾಗಿದ್ದರೆ, ಇದನ್ನೇ ತಮ್ಮ ದುಷ್ಕೃತ್ಯಕ್ಕೆ ಬಳಕೆ ಮಾಡಿಕೊಳ್ಳಲು ಪಾಕಿಸ್ತಾನ ಉಗ್ರರು ಯತ್ನಿಸುತ್ತಿದ್ದಾರೆ. ಇಂದು ಮುಂಜಾನೆ ಪೂಂಛ್ ಸೆಕ್ಟರ್ ವ್ಯಾಪ್ತಿಯಲ್ಲಿ ಭಾರತದ ಗಡಿಯೊಳಗೆ  ನುಸುಳಿರುವ ಉಗ್ರರು ಭಾರತೀಯ ಯೋಧರತ್ತ ಗುಂಡಿನ ಸುರಿಮಳೆ ಗರೆದಿದ್ದಾರೆ.

ಉಗ್ರರು ಗಡಿಯೊಳಗೆ ನುಸುಳಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೂಂಛ್ ಸೆಕ್ಟರ್ ನಲ್ಲಿ ಸೈನಿಕರು ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ  ಸುರಿಮಳೆ ಗರೆದಿದ್ದಾರೆ. ಉಗ್ರ ದಾಳಿ ಸೈನಿಕರು ಮತ್ತು ಪೊಲೀಸರು ಕೂಡ ಪ್ರತಿದಾಳಿ ನಡೆಸಿದರಾದರೂ ಈ ಹಂತದಲ್ಲಿ ಕಾರ್ಯಾಚರಣೆ ನಿರತರಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರು  ಗುಂಡೇಟಿಗೆ ಬಲಿಯಾಗಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಉಗ್ರರು ಅವಿತು ಕುಳಿತಿದ್ದು ಅವರು ವಿರುದ್ಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

No Comments

Leave A Comment