Log In
BREAKING NEWS >
ಉಡುಪಿಯ ಶ್ರೀಶಿರೂರು ಶ್ರೀಗಳು ಹರಿಪಾದಕ್ಕೆ-ಇನ್ನಿಲ್ಲವಾದರು ಶ್ರೀಗಳು-ಉಡುಪಿಯ ಶ್ರೀಕೃಷ್ಣಮಠ ಹಾಗೂ ಶಿರೂರು ಮಠಕ್ಕೆ ಬಿಗುಭದ್ರತೆ

ನಮ್ಮ ಜನರಿಗೆ ಕುಡಿಯಲು ನೀರಿಲ್ಲ, ಇನ್ನು ತಮಿಳು ನಾಡಿಗೆ ಕೃಷಿಗೆ ನೀರು ಕೊಡುವುದು ಯಾವ ನ್ಯಾಯ?:ಹೆಚ್ ಡಿ ದೇವೇಗೌಡ

devegowda-cauveryಮಂಡ್ಯ: ನಮ್ಮ ನಾಡಿನ ಜನರು ಮತ್ತು ರೈತರಿಗೆ ಕುಡಿಯಲು ನೀರಿಲ್ಲ, ಹೀಗಿರುವಾಗ ತಮಿಳು ನಾಡಿಗೆ ಬೆಳೆ ಬೆಳೆಯಲು ನೀರು ಕೊಡಲು ಹೇಗೆ ಸಾಧ್ಯ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಪ್ರಶ್ನಿಸಿದ್ದಾರೆ.

ಇಂದು ಬೆಳಗ್ಗೆ ಹೆಲಿಕಾಪ್ಟರ್ ನಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯದ ವೈಮಾನಿಕ ಸಮೀಕ್ಷೆ ನಡೆಸಿದ ಅವರು ಜಲಾಶಯದಲ್ಲಿನ ನೀರಿನ ವಾಸ್ತವ ಸ್ಥಿತಿ ಅರಿಯುವ ಪ್ರಯತ್ನ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಡ್ಯಾಂಗಳ ವಾಸ್ತವ ಸ್ಥಿತಿ ಅಧ್ಯಯನ ಮಾಡಲು ನಾನು ಇಂದು ಇಲ್ಲಿಗೆ ಬಂದಿದ್ದೇನೆ. ಮಂಡ್ಯ, ಕೆಆರ್ ಎಸ್, ಮೈಸೂರು, ಹಾಸನ, ಬೆಂಗಳೂರು ಮೊದಲಾದ ಪ್ರದೇಶಗಳ ಜೀವನಾಡಿ ಕಾವೇರಿ ನದಿ ನೀರು. ಇಲ್ಲಿನ ಭಾಗಗಳ ರೈತರಿಗೆ ಮತ್ತು ಜನರಿಗೆ ಕುಡಿಯಲು ನೀರಿಲ್ಲದಿರುವಾಗ ತಮಿಳು ನಾಡಿನ ಸಾಂಬಾ ಬೆಳೆಗೆ ನೀರು ಬಿಡಲು ಹೇಗೆ ಸಾಧ್ಯ ಮತ್ತು ಅದು ಎಷ್ಟು ಸರಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾವೇರಿ ಜಲಾನಯನ ಪ್ರದೇಶಗಳ ವಸ್ತುಸ್ಥಿತಿಯನ್ನು ಸರ್ಕಾರದ ಪ್ರತಿನಿಧಿಗಳ ಗಮನಕ್ಕೆ ತರುತ್ತೇನೆ ಎಂದು ಮಾಜಿ ಪ್ರಧಾನಿ ಹೇಳಿದರು.

No Comments

Leave A Comment