Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ

dscn3541ಉಡುಪಿ, ಸೆಪ್ಟೆಂಬರ್ ೧೦ (ಕರ್ನಾಟಕ ವಾರ್ತೆ):-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನೆಯನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು, ಈ ಬಾರಿಯ ರಾಜ್ಯದ ಕ್ರೀಡಾರತ್ನ ಮತ್ತು ಏಕಲವ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹೊರಗೆ ಅಂದರೆ ಮೈಸೂರಿನಲ್ಲಿ ನಡೆಸಲಾಗುವುದು, ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿ ಈಜುಕೊಳವನ್ನೂ ಸಹ ಉದ್ಗಾಟಿಸಲಾಗುವುದು ಎಂದು ಹೇಳಿದರು.

ಮೈಸೂರಿನಲ್ಲಿ ನಡೆಯುವ ಈ ಬಾರಿಯ ದಸರಾ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಮತ್ತು ಗರಿಷ್ಠ ತಂಡಗಳು ಭಾಗವಹಿಸುವಂತಾಗಲಿ , ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ತೋರಲಿ ಎಂದು ಸಚಿವರು ಹಾರೈಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಈ ಬಾರಿಯ ದಸರಾ ಕ್ರೀಡಾಕೂಟದ ವಿಭಾಗಮಟ್ಟದ ಕ್ರೀಡೆಗಳು ಉಡುಪಿ ಜಿಲ್ಲೆಯಲ್ಲಿಯೇ ನಡೆಯಲಿದ್ದು , ಜಿಲ್ಲೆಯ ಕ್ರೀಡಾಪಟುಗಳು ಉತ್ತಮ ಸಾಧನೆ ತೋರಬೇಕು, ಇಂದಿನ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯತ್ ವತಿಯಿಂದ ಮಾಡಲಾಗಿದ್ದು, ಮೈಸೂರಿನ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ನೀಡುವ ದಿನಭತ್ಯೆಯನ್ನು ೧೫೦ ರೂ ಗಳಿಗೆ ಹೆಚ್ಚಿಸಬೇಕು ಎಂದು ಹೇಳಿದರು.

ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ , ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಯ್ಕರ್ ಉಪಸ್ಥಿತರಿದ್ದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

No Comments

Leave A Comment