Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ತಮಿಳುನಾಡಿಗೆ ನೀರು ಬಿಡುಗಡೆ; ಆದೇಶದಲ್ಲಿ ಮಾರ್ಪಾಡು ಕೋರಿ ರಾಜ್ಯ ಸರ್ಕಾರ ‘ಸುಪ್ರೀಂ’ ನಲ್ಲಿ ಅರ್ಜಿ ಸಲ್ಲಿಕೆ

cauvery-water-supremeಬೆಂಗಳೂರು: ತಮಿಳು ನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮಾರ್ಪಾಡು ಮಾಡಬೇಕೆಂದು ಕೋರಿ ರಾಜ್ಯ ಸರ್ಕಾರ ಭಾನುವಾರ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಗೆ ಅರ್ಜಿ ಸಲ್ಲಿಸಿದೆ.

ತಮಿಳು ನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸೆಪ್ಟೆಂಬರ್ 5ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಮಾರ್ಪಾಡು ಮಾಡಬೇಕೆಂದು ಕೋರಿ ಕರ್ನಾಟಕ ಸರ್ಕಾರ ಅರ್ಜಿ ಹಾಕಿದೆ. ಕೋರ್ಟ್ ನ ಆದೇಶದಂತೆ ತಮಿಳು ನಾಡಿಗೆ ಈಗಾಗಲೇ 66 ಸಾವಿರ ಕ್ಯೂಸೆಕ್ ನೀರು ಹರಿಸಿದ್ದೇವೆ. ಇನ್ನು ಬಿಡುಗಡೆ ಮಾಡಲು ನಮ್ಮ ಜಲಾಶಯದಲ್ಲಿ ನೀರಿಲ್ಲ. ಹಾಗಾಗಿ ಆದೇಶಕ್ಕೆ ಮಾರ್ಪಾಡು ತರಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.

ಇಂದು ಮಧ್ಯಾಹ್ನ ನಂತರ ಅರ್ಜಿ ಸಲ್ಲಿಕೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅರ್ಜಿ ವಿಚಾರಣೆ ಬಗ್ಗೆ ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.

No Comments

Leave A Comment