Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಭುಗಿಲೆದ್ದ ಕಾವೇರಿ ಕಿಚ್ಚು; ವಾಟಾಳ್ ಬಂಧನ, ಲಾರಿ, ಕಾರುಗಳಿಗೆ ಬೆಂಕಿ

cauveryಬೆಂಗಳೂರು/ಮಂಡ್ಯ: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಮತ್ತೆ ಕರ್ನಾಟಕಕ್ಕೆ ಮುಖಭಂಗವಾಗಿದ್ದರೆ, ಮತ್ತೊಂದೆಡೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದರಿಂದ ಸೋಮವಾರ ಬೆಂಗಳೂರು, ಮಂಡ್ಯ, ಮೈಸೂರಿನಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ಬೀದಿಗಿಳಿದ ಪರಿಣಾಮ ಕಾವೇರಿ ಕಿಚ್ಚು ಭುಗಿಲೆದ್ದಂತಾಗಿದೆ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ತಮಿಳುನಾಡು ಮೂಲದ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ. ಕೆಲವೆಡೆ ತಮಿಳುನಾಡು ಮೂಲದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.12cauvery-attack3

ಮೈಸೂರು ರಸ್ತೆಯ ರಸ್ತೆ ಮಧ್ಯೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ರಸ್ತೆ ಬಳಿಯ ಟಿಂಬರ್ ಯಾರ್ಡ್ ಬಳಿ ನಡುರಸ್ತೆಯಲ್ಲೇ ತಮಿಳುನಾಡು ನೋಂದಣಿಯ 2 ಲಾರಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರಗೊಂಡಿದ್ದು, ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಅಲ್ಲದೇ ಮತ್ತೆ ಕೆಆರ್ ಎಸ್ ಡ್ಯಾಂಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಗಿದೆ. ಕೆಲವು ತಮಿಳರ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ವಾಟಾಳ್, ಸಾ.ರಾ.ಗೋವಿಂದು ಬಂಧನ
ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇನ್ನೂ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಆದೇಶ ನೀಡಿರುವುದನ್ನು ಖಂಡಿಸಿ ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್, ಸಾರಾ ಗೋವಿಂದು, ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

No Comments

Leave A Comment