Log In
BREAKING NEWS >
ಜಮ್ಮು: ವೇಗವಾಗಿ ಸಾಗುತ್ತಿದ್ದ ಎಸ್‌ಯುವಿ ವಾಹನವೊಂದು ಆಯ ತಪ್ಪಿ ಕಮರಿಗೆ ಬಿದ್ದ ಪರಿಣಾಮ ಅದರಲ್ಲಿದ್ದ ನಾಲ್ವರು ಮಹಿಳೆಯರು, ಐವರು ಮಕ್ಕಳು ಸೇರಿ 11 ಮಂದಿ ಸಾವಿಗೀಡಾಗಿದ್ದಾರೆ.... 48 ಗಂಟೆಗೆ ಮುನ್ನ ಪ್ರಣಾಳಿಕೆ ಬೇಡ: ಆಯೋಗ...

ಯೋಜನೆಗಳ ಪ್ರಯೋಜನ ಪಡೆಯಿರಿ- ಮೀನಾಕ್ಷಿ ಮಾಧವ

a2ಉಡುಪಿ: ರಾಜ್ಯ ಸರಕಾರ ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಈ ಯೋಜನೆಗಳ ಪ್ರಯೋಜನ ಪಡೆಯುವಂತೆ ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಹೇಳಿದ್ದಾರೆ.

ಅವರು ಮಂಗಳವಾರ ಉಡುಪಿ ನಗರಸಭೆಯ ಆವರಣದಲ್ಲಿ, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ಮಾಹಿತಿಯನ್ನು ಗ್ರಾಮೀಣ ಭಾಗದ ಜನರಿಗೆ ತಿಳಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಸಿದ್ದಪಡಿಸಿರುವ ಬೃಹತ್ ಎಲ್.ಇ.ಡಿ ಪರದೆ ಹೊಂದಿರುವ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

ಸರಕಾರದ ವಿವಿಧ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಈ ವಾಹನದಲ್ಲಿನ ಎಲ್.ಇ.ಡಿ ಪರದೆ ಮೂಲಕ ಪ್ರದರ್ಶನ ಮಾಡಲಾಗುತ್ತಿದ್ದು, ಸಾರ್ವಜನಿಕರು ಯೋಜನೆಗಳ ಬಗ್ಗೆ ಅರಿವು ಹಾಗೂ ಪ್ರಯೋಜನ ಪಡೆಯುವಂತೆ ನಗರಸಭೆಯ ಅಧ್ಯಕ್ಷರು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆಯ ಸದಸ್ಯ ವಿಜಯ್ ಮಂಚಿ , ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಹಿಣಿ ಕೆ. ಉಪಸ್ಥಿತರಿದ್ದರು.

ಇಂದಿನಿಂದ 10ದಿನಗಳ ಕಾಲ ಜಿಲ್ಲೆಯ ವಿವಿದೆಡೆ ಸಂಚರಿಸುವ ಈ ವಾಹನವು, ಪ್ರತಿದಿನ ೫ ಗ್ರಾಮಗಳಂತೆ ಒಟ್ಟು ೫೦ ಗ್ರಾಮಗಳಲ್ಲಿ ಸರಕಾರದ ಯೋಜನೆಗಳ ಕುರಿತು ಪ್ರಚಾರ ನೀಡಲಿದೆ.

No Comments

Leave A Comment