Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಡಾ| ಬಿ.ಎಂ. ಹೆಗ್ಡೆ ಅವರಿಗೆ ಕಾರಂತ ಹುಟ್ಟೂರ ಪುರಸ್ಕಾರ

bm-hegdeಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್‌ ಮತ್ತು ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡಲಾಗುವ “ಕಾರಂತ ಹುಟ್ಟೂರ ಪುರಸ್ಕಾರ’ಕ್ಕೆ ಈ ಬಾರಿ ಡಾ| ಬಿ.ಎಂ. ಹೆಗ್ಡೆ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್‌ ತಿಳಿಸಿದ್ದಾರೆ.

ವೈದ್ಯಕೀಯ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಡಾ| ಹೆಗ್ಡೆ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಅ. 10ರಂದು ಜರಗಲಿದೆ. ಈ ಬಾರಿ ಕಾರಂತ ಜನ್ಮ ದಿನೋತ್ಸವದ ಅಂಗವಾಗಿ ಹತ್ತು ದಿನಗಳ ಕಾಲ ಸಾಂಸ್ಕೃತಿಕ, ಸಾಹಿತ್ಯಕ ಕಾರ್ಯಕ್ರಮ “ದಿಬ್ಬಣ-2016′ ಆಯೋಜಿಸಲಾಗಿದ್ದು, ಇದರಲ್ಲಿ ವಿವಿಧ ಸಮ್ಮೇಳನಗಳು, ನಾಟಕ, ಯಕ್ಷಗಾನ, ವಿಚಾರಗೋಷ್ಠಿ, ಚಲನಚಿತ್ರ ಪ್ರದರ್ಶನ, ಪಂಚಾಯತ್‌ ಹಬ್ಬ ಮೊದಲಾದವುಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಎಚ್‌. ಪ್ರಮೋದ ಹಂದೆ, ಪ್ರತಿಷ್ಠಾನದ ವಕ್ತಾರ ಅಶ್ವತ್ಥ್ ಆಚಾರ್‌, ಆಯ್ಕೆ ಸಮಿತಿ ಸದಸ್ಯ ಯು.ಎಸ್‌. ಶೆಣೈ, ಟ್ರಸ್ಟಿ ಸುಬ್ರಾಯ ಆಚಾರ್ಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

No Comments

Leave A Comment