Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಮುಂದುವರಿದ ಹೋರಾಟ ರೈಲು ತಡೆಗೆ ಯತ್ನ: ವಾಟಾಳ್‌ ಸೇರಿ 50 ಮಂದಿ ಬಂಧನ

news15-ksr-8ಬೆಂಗಳೂರು: ಕಾವೇರಿ ನೀರು ಹಂಚಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಸಂದೇಶ ಮುಟ್ಟಿಸಲು ರೈಲುತಡೆ ಚಳವಳಿ ನಡೆಸಲು ಕರೆಕೊಟ್ಟಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆಗಿಳಿದಾಗ ಕೇಂದ್ರ ರೈಲುನಿಲ್ದಾಣದ ಬಳಿ ಪೊಲೀಸರು ವಾಟಾಳ್‌ ನಾಗರಾಜ್‌ ಸೇರಿದಂತೆ 50 ಜನರನ್ನು ಬಂಧಿಸಿದ್ದಾರೆ.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕನ್ನಡ ಚಳವಳಿ ವಾಟಾಳ್‌ ಪಕ್ಷದ ವಾಟಾಳ್‌ ನಾಗರಾಜ್‌ ಹಾಗೂ ಸಾ.ರಾ. ಗೋವಿಂದು, ಪ್ರವೀಣ್‌ ಶೆಟ್ಟಿ ಅವರನ್ನು ಬಂಧಿಸಿರುವುದಾಗಿ ಬೆಂಗಳೂರು ನಗರ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

ಪ್ರತಿಭಟನೆ ನಡೆಸಲು ಮೈಸೂರು ಬ್ಯಾಂಕ್‌ ವೃತ್ತದಿಂದ ಕಾರಿನಲ್ಲಿ ಬಂದ ಮುಖಂಡರುಗಳನ್ನು ರೈಲು ನಿಲ್ದಾಣದ ಬಳಿ ಇಳಿಯುತ್ತಿದ್ದಂತೆ ಪೊಲೀಸರು ಬಂಧಿಸಿ ಬಸ್‌ನಲ್ಲಿ ಕರೆದೊಯ್ದಿದ್ದಾರೆ.

No Comments

Leave A Comment