Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಚಿಕ್ಕಪೇಟೆಯ ನಾಲ್ಕು ಹಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ

67676ಬೆಂಗಳೂರು: ಇಲ್ಲಿನ ಚಿಕ್ಕಪೇಟೆಯ ಬಿ.ವಿ.ಕೆ ಅಯ್ಯಂಗಾರ್‌ ರಸ್ತೆಯಲ್ಲಿನ ನಾಲ್ಕು ಅಂತಸ್ತಿನ ಕಟ್ಟದಲ್ಲಿ ಶುಕ್ರವಾರ ಬೆಳಗಿನಜಾವ ಬೆಂಕಿ ಹೊತ್ತಿಕೊಂಡಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ನೆಲಮಹಡಿಯಲ್ಲಿ ವಿದ್ಯುತ್‌ ಉಪಕರಣ ಮಾರಾಟ ಮಳಿಗೆಯಲ್ಲಿ ಬೆಳಗಿನಜಾವ 4.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಮೇಲಂತಸ್ತುಗಳಿಗೆ ವ್ಯಾಪಿಸಿದೆ. ಮೇಲಿನ ಮಹಡಿಗಳ ಮನೆಗಳಲ್ಲಿ ಜನರು ವಾಸವಿದ್ದಾರೆ. ಶಾರ್ಟ್‌ ಸರ್ಕೀಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಅವಘಡದಿಂದ ಅಕ್ಕಪಕ್ಕದ ಕಟ್ಟಡಗಳ ಕಿಟಕಿ ಗಾಜುಗಳಿಗೂ ಹಾನಿಯಾಗಿದೆ ಎನ್ನಲಾಗಿದೆ. ಅಗ್ನಿ ಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ

No Comments

Leave A Comment