Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಗಣಪತಿ ಆತ್ಮಹತ್ಯೆ ಪ್ರಕರಣ: ಕೆ.ಜೆ.ಜಾರ್ಜ್‌, ಎ.ಎಂ.ಪ್ರಸಾದ್, ಪ್ರಣಬ್‌ ಮೊಹಾಂತಿಗೆ ಕ್ಲೀನ್ ಚಿಟ್

kjgarjಮಡಿಕೇರಿ: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಜಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ.

ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿದ ಸಿಐಡಿ ಪೊಲೀಸರು ಶನಿವಾರ ಮಡಿಕೇರಿ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದು, ಮಾಜಿ ಸಚಿವ ಕೆ.ಜೆ.ಜಾರ್ಜ್, ಲೋಕಾಯುಕ್ತ ಐಜಿಪಿಯಾಗಿದ್ದ ಪ್ರಣಬ್‌ ಮೊಹಾಂತಿ ಹಾಗೂ ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಎ.ಎಂ.ಪ್ರಸಾದ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಗಣಪತಿ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಸೆಪ್ಟೆಂಬರ್ 19ರೊಳಗೆ ಸಲ್ಲಿಸಬೇಕು ಎಂದು ಮಡಿಕೇರಿ ಕೋರ್ಟ್ ಸಿಐಡಿಗೆ ಸೂಚನೆ ನೀಡಿತ್ತು. ಎರಡು ದಿನ ಮೊದಲೇ ಅಂದರೆ ಸೆ.17ರಂದು ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.

ಮಂಗಳೂರು ಡಿವೈಎಸ್ಪಿಯಾಗಿದ್ದ ಗಣಪತಿಯವರು ಜುಲೈ 7ರಂದು ಮಡಿಕೇರಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಖಾಸಗಿ ವಾಹನಿಯೊಂದಕ್ಕೆ ಸಂದರ್ಶನವೊಂದನ್ನು ನೀಡಿದ್ದರು. ಸಂದರ್ಶನದಲ್ಲಿ ನನಗೇನಾದರೂ ಆದರೆ  ಕೆ.ಜೆ.ಜಾರ್ಜ್, ಎಡಿಜಿಪಿ ಎ.ಎಂ. ಪ್ರಸಾದ್ ಮತ್ತು ಲೋಕಾಯುಕ್ತ ಐಜಿಪಿ ಪ್ರಣಬ್ ಮೊಹಾಂತಿಯವರೇ ನೇರಹೊಣೆಯಾಗಿರುತ್ತಾರೆಂದು ಹೇಳಿದ್ದರು.

ಈ ಪ್ರಕರಣ ರಾಜ್ಯದಾದ್ಯಂತ ಸಾಕಷ್ಟು ವಿವಾದ ಹಾಗೂ ಚರ್ಚೆಯನ್ನು ಹುಟ್ಟುಹಾಕಿತ್ತು. ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು.

No Comments

Leave A Comment