Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಮಲ್ಯ ಸಾಲಬಾಕಿ: ಚೆಕ್‌ ಬೌನ್ಸ್‌ ಪ್ರಕರಣ: ಮಲ್ಯ ಆಪ್ತ ರಘುನಾಥನ್‌ಗೆ 18 ತಿಂಗಳು ಜೈಲು

court01ಹೈದರಾಬಾದ್‌: ಚೆಕ್‌ ಬೌನ್ಸ್ ಪ್ರಕರಣ ಸಂಬಂಧ ವಿಜಯ್‌ ಮಲ್ಯ ಆಪ್ತ ಕಿಂಗ್‌ಫಿಷರ್‌ ಏರ್‌ಲೈನ್ಸ್‌ನ ಮಾಜಿ ಮುಖ್ಯ ಹಣಕಾಸು ಅಧಿಕಾರಿ ಎ. ರಘುನಾಥನ್‌ಗೆ ಹೈದರಾಬಾದ್‌ ನ್ಯಾಯಾಲಯ 18 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಐಡಿಬಿಐ ಬ್ಯಾಂಕ್‌ನಿಂದ  900 ಕೋಟಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ವಿಜಯ್‌ ಮಲ್ಯ ಒಡೆತನದ ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಮತ್ತು ಐಡಿಬಿಐ ಬ್ಯಾಂಕ್‌ನ ಆರು ಅಧಿಕಾರಿಗಳಿಗೆ ಸಮನ್ಸ್‌ ಜಾರಿ ಮಾಡಿತ್ತು.

ಬ್ಯಾಂಕ್‌ನ ಮಾಜಿ ಅಧ್ಯಕ್ಷ ಯೋಗೇಶ್‌ ಅಗರ್ವಾಲ್, ಕಿಂಗ್‌ಫಿಷರ್‌ ಏರ್‌ಲೈನ್ಸ್‌ನ ಮುಖ್ಯ ಹಣಕಾಸು ಅಧಿಕಾರಿ ಎ.ರಘುನಾಥನ್‌ ಹಾಗೂ ಎರಡೂ ಸಂಸ್ಥೆಗಳ ಹಿರಿಯ ಕಾರ್ಯಕಾರಿ ಸದಸ್ಯರಿಗೆ ವಿಚಾರಣೆ ವೇಳೆ ಹಾಜರಿರುವಂತೆ ಸಮನ್ಸ್‌ ಜಾರಿ ಮಾಡಿತ್ತು.

No Comments

Leave A Comment