Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಹೈ ಅಲರ್ಟ್‌ ಮುಂಬೈ: ಶಂಕಿತನ ರೇಖಾಚಿತ್ರ ಬಿಡುಗಡೆ

rekhachitrraಮುಂಬೈ: ಉರಣ್‌ ನೌಕಾನೆಲೆ ಸಮೀಪ ಗುರುವಾರ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ವಿದ್ಯಾರ್ಥಿಗಳು ನೀಡಿದ ಮಾಹಿತಿಯ ಆಧಾರದ ಮೇಲೆ ರೇಖಾಚಿತ್ರ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಿಸಿದ್ದು ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ’ ಎಂದು ಮುಂಬೈನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ದೇವನ್‌ ಭಾರ್ತಿ ಹೇಳಿದ್ದಾರೆ.

ಸೇನಾ ಸಮವಸ್ತ್ರ ಧರಿಸಿದ ನಾಲ್ಕಕ್ಕೂ ಹೆಚ್ಚು ಮಂದಿ ಉರಣ್‌ ನೌಕಾನೆಲೆಯ ಬಳಿ ಗುರುವಾರ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬಗ್ಗೆ ಕೆಲ ವಿದ್ಯಾರ್ಥಿಗಳು ಶಿಕ್ಷಕರಿಗೆ ಮಾಹಿತಿ ನೀಡಿದ್ದರು. ಶಿಕ್ಷಕರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದರು.

No Comments

Leave A Comment