Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ; ಕಲಬುರ್ಗಿ, ಬೀದರ್ ನಲ್ಲಿ ಪ್ರವಾಹ ಪರಿಸ್ಥಿತಿ

north-kಬೀದರ್: ಆಂಧ್ರ ಪ್ರದೇಶ ಹಾಗೂ ಒಡಿಶಾ ಕರಾವಳಿ ತೀರದಲ್ಲಿ ಉಂಟಾದ ವಾಯುಭಾರ ಕುಸಿತ ಪರಿಣಾಮ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕಲಬುರ್ಗಿ ಹಾಗೂ ಬೀದರ್  ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದೆರಡು ದಿನಗಳಿಂಗ ಉತ್ತರ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೀದರ್ ಮತ್ತು ಕಲಬುರ್ಗಿಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ನದಿ ಭಾಗದ ಜನವಸತಿ ಪ್ರದೇಶಗಳು  ಸಂಪೂರ್ಣ ಜಲಾವೃತ್ತವಾಗಿವೆ.

ಪ್ರಮುಖವಾಗಿ ಕಲಬುರ್ಗಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕು ಚಿಂಚೋಳಿ  ಮತ್ತು ಗೋಟೂರ ನಡುವಿನ  ಸೇತುವೆಯು ಕಾಗಿಣಾ ನದಿಯ ಪ್ರವಾಹದಿಂದ ಸಂಪೂರ್ಣ ಮುಳುಗಡೆಯಾಗಿದೆ.

ಇದೇ ನದಿಯಲ್ಲಿ ಜಮೀನಿಗೆ ಹೋಗಿದ್ದ 5 ರೈತರು ಪ್ರವಾಹಕ್ಕೆ ಸಿಲುಕಿದ್ದರು. ಅಲ್ಲಿದ್ದ ಮರವನ್ನು ಗಟ್ಟಿಯಾಗಿ  ಹಿಡಿದ್ದ ರೈತರನ್ನು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಬೋಟ್‌ ಮೂಲಕ ಅಪಾಯದಿಂದ ಪಾರು ಮಾಡಿದರು.ಚಿತ್ತಾಪುರ ತಾಲ್ಲೂಕಿನ ದಂಡೋತಿ ಮತ್ತು ಸೇಡಂ ತಾಲ್ಲೂಕಿನ ಮಳಖೇಡ ಸೇತುವೆಗಳು ಕೂಡ ಮುಳುಗಡೆಯಾಗಿವೆ. ಸೇಡಂ ತಾಲ್ಲೂಕಿನ ಕಾಗಿಣಾ ನದಿಯಲ್ಲಿ ನೀರಿನ ಹರಿವಿನ ಮಟ್ಟ ಹೆಚ್ಚಾಗಿ  ಮಳಖೇಡ ಸೇತುವೆ ಮೇಲೆ ನೀರು ಹರಿದಿದ್ದರಿಂದ ನಾಲ್ಕು ಬಾರಿ ರಾಜ್ಯ ಹೆದ್ದಾರಿ ರಸ್ತೆಯನ್ನು ಸ್ಥಗಿತಗೊಂಡಿತ್ತು.

ಮಳೆ ಅಬ್ಬರಕ್ಕೆ ಕಲಬುರ್ಗಿ ಜಿಲ್ಲೆಯೊಂದರಲ್ಲೇ ಬರೊಬ್ಬರಿ 380 ಮನೆಗಳು  ಕುಸಿದಿವೆ. ರಾಯಚೂರಿನಲ್ಲೂ 4 ಮನೆಗಳು ಕುಸಿದಿರುವ ಕುರಿತು ವರದಿಯಾಗಿದೆ.ಇತ್ತ ಬೀದರ್ ನಲ್ಲೂ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಜಿಲ್ಲೆಯ ಐದು ಕೆರೆಗಳು ಕಟ್ಟೆ ಒಡೆದಿವೆ. ಪರಿಣಾಮ ಮಾಂಜರಾ ನದಿ, ಹಳ್ಳ ಹಾಗೂ ಕೆರೆಗಳು ತುಂಬಿ ಹರಿಯುತ್ತಿದ್ದು, 10 ಪ್ರಮುಖ  ಸೇತುವೆಗಳು ಮುಳುಗಡೆಯಾಗಿವೆ.

ಜಿಲ್ಲೆಯಾದ್ಯಂತ 1,152ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ ಎಂದು ತಿಳಿದುಬಂದಿದೆ. ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು  ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅನುರಾಗ ತಿವಾರಿ ಆದೇಶಿಸಿದ್ದಾರೆ. ಎರಡು ದಿನದಲ್ಲಿ ಜಿಲ್ಲೆಯಲ್ಲಿ ಸುಮಾರು 185 ಮಿಮಿ ಮಳೆಯಾಗಿದ್ದು ವಾಡಿಕೆಗಿಂತ  ಮೂರು ಪಟ್ಟು ಮಳೆಯಾದ ವರದಿಯಾಗಿದ್ದು. ಮಳೆಯಿಂದ 1154 ಮನೆಗಳ ಗೋಡೆ ಕುಸಿದಿವೆ. ಸೆಪ್ಟೆಂಬರ್ 28ರವರೆಗೆ ಮಳೆ ಮುಂದುವರೆಯುವ ಲಕ್ಷಣವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ  ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಬಿಡುಗಡೆ; ಕೃಷ್ಣಾ ನದಿಯಲ್ಲಿ ಪ್ರವಾಹಇದೇ ವೇಳೆ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರುವುದರಿಂದ ರಾಜಾಪುರ ಬ್ಯಾರೇಜ್‌ ಮೂಲಕ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗಿದ್ದು,  ತಾಲ್ಲೂಕಿನ ಕಲ್ಲೋಳ ಮತ್ತು ಯಡೂರ ಗ್ರಾಮಗಳ ಮಧ್ಯದ ಕೆಳಮಟ್ಟದ ಸೇತುವೆ ಶುಕ್ರವಾರ ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.

No Comments

Leave A Comment