Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಹೈಶುಗರ್‌, ಕಿಡ್ನಿ ಸಮಸ್ಯೆ: ಜಯಲಲಿತಾ ಸಿಂಗಾಪೂರ್ ಗೆ ಶಿಫ್ಟ್

jayaಚೆನ್ನೈ: ಅನಾರೋಗ್ಯದಿಂದ ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪೂರಕ್ಕೆ ಕರೆದೊಯ್ಯುತ್ತಿರುವ ಬಗ್ಗೆ ವರದಿಯಾಗಿದೆ. 

 ಜ್ವರ ಹಾಗೂ ದೇಹದಲ್ಲಿನ ನೀರಿನಂಶ ಕಡಿಮೆಯಾದ ಹಿನ್ನೆಲೆಯಲ್ಲಿ  ಗುರುವಾರ ರಾತ್ರಿ 68 ವರ್ಷದ ಜಯಲಲಿತಾ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಚಿಕಿತ್ಸೆಯಿಂದ ಜಯಲಲಿತಾ ಅವರು ಚೇತರಿಸಿಕೊಳ್ಳುತ್ತಿದ್ದು, ಇದೀಗ ಕಿಡ್ನಿ ಹಾಗೂ ಅತೀ ಮಧುಮೇಹ ಸಮಸ್ಯೆ ಉಲ್ಬಣಿಸಿರುವ ಹಿನ್ನಲೆಯಲ್ಲಿ ಸಿಂಗಾಪೂರದ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ವರದಿಯಾಗಿದೆ. 

ಜಯಲಲಿತಾ ಅವರ ಚೇತರಿಕೆಗಾಗಿ ತಮಿಳುನಾಡಿನಾದ್ಯಂತ ಅಭಿಮಾನಿಗಳು ಪ್ರಾರ್ಥನೆ ನಡೆಸುತ್ತಿದ್ದು, ಆಸ್ಪತ್ರೆಯ ಹೊರಗೆ ಸಾವಿರಾರು ಜನರು ಜಮಾಯಿಸುತ್ತಿದ್ದಾರೆ. ಪೊಲೀಸ್‌ ಭದ್ರತೆ ಬಿಗಿಗೊಳಿಸಲಾಗಿದೆ

 

No Comments

Leave A Comment