Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ....ಮಾರ್ಚ್ 19ರ೦ದು ಚಾ೦ದ್ರಮಾನ ಯುಗಾದಿ ಹಬ್ಬ....

ಜಮ್ಮುವಿನಲ್ಲಿ ಕಂದಕಕ್ಕೆ ಉರುಳಿದ ಬಸ್: 7 ಸಾವು, 9 ಗಾಯ

busಶ್ರೀನಗರ: 21 ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ವೊಂದು ಕಂದಕಕ್ಕೆ ಉರುಳಿದ್ದು ಪರಿಣಾಮ 7 ಮಂದಿ ಸಾವನ್ನಪ್ಪಿದ್ದು 9 ಜನರಿಗೆ ಗಂಭೀರ ಗಾಯಗಳಾಗಿವೆ.

ಜಮ್ಮು ಮತ್ತು ಕಾಶ್ಮೀರದ ಟ್ರಾಗ್ ಬಾಲ್ ನ ಗುರೇಜ್-ಬಂಡಿಪೊರ ರಸ್ತೆ ಬಳಿ ಕಳೆದ ರಾತ್ರಿ ಈ ಅವಗಡ ಸಂಭವಿಸಿದ್ದು, ಸ್ಥಳದಲ್ಲೇ ಐದು ಮಂದಿ ಸಾವನ್ನಪ್ಪಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಇನ್ನುಳಿದಂತೆ 9 ಮಂದಿಗೆ ಗಾಯಗಳಾಗಿದ್ದು ಬಂಡಿಪೋರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನ ಚಾಲಕ ಕಣ್ಮರೆಯಾಗಿದ್ದು ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬಾರ್ಡರ್ ರೋಡ್ಸ್ ಆರ್ಗನೈಜೆಷನ್(ಬಿಆರ್ಒ)ಗೆ ಸೇರಿದ ಬಸ್ ಇದಾಗಿದೆ.

No Comments

Leave A Comment