ಡೇಟ್ ಫಿಕ್ಸ್; ಸೆ.26ರಂದು ಮಾಜಿ ಸಚಿವ ಜಾರ್ಜ್ ಮತ್ತೆ ಸಂಪುಟಕ್ಕೆ
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಜೆ.ಜಾರ್ಜ್ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಲು ಹೈಕಮಾಂಡ್ ಒಪ್ಪಿಗೆ ನೀಡಿದ್ದ ಹಿನ್ನೆಲೆಯಲ್ಲಿ ಜಾರ್ಜ್ ಅವರು ಸೆ.26ರಂದು ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಕೆಜೆ ಜಾರ್ಜ್ ಅವರು ಸೆ.26ರ ಸೋಮವಾರದಂದು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ವರದಿ ವಿವರಿಸಿದೆ.
ಕಾವೇರಿ ವಿವಾದ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಜತೆಯೂ ಮಾತುಕತೆ ನಡೆಸಿದ್ದ ಈ ಸಂದರ್ಭದಲ್ಲಿ ಕೆಜೆ ಜಾರ್ಜ್ ಮತ್ತೆ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿತ್ತು.