Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಗುಜರಾತ್; ದನದ ಶವ ವಿಲೇವಾರಿಗೆ ನಕಾರ, ಗರ್ಭಿಣಿ ಮಹಿಳೆ ಮೇಲೆಯೂ ಹಲ್ಲೆ

gujarat-dalit-woman_ಗುಜರಾತ್:ದನದ ಶವ ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಗರ್ಭಿಣಿ ಮಹಿಳೆ ಸೇರಿದಂತೆ ದಲಿತ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಗುಜರಾತ್ ನ ಬನ್ಸಾಕಾಂತಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ನಿಲೇಶ್ ರಾನ್ವಾಸಿಯಾ ನೀಡಿದ ದೂರಿನ ಪ್ರಕಾರ, ದರ್ಬಾರ್ ಸಮುದಾಯಕ್ಕೆ ಸೇರಿದ್ದ ಸುಮಾರು 10 ಮಂದಿ ಏಕಾಏಕಿ ಮನೆನುಗ್ಗಿ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ತನ್ನ ಗರ್ಭಿಣಿ ಪತ್ನಿ ಸಂಗೀತಾ ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ದೂರಿದ್ದಾರೆ. ದನದ ಶವವನ್ನು ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಈ ಕೃತ್ಯ ಎಸಗಿರುವುದಾಗಿ ದೂರಿನಲ್ಲಿ ವಿವರಿಸಿದ್ದಾರೆ.

ಸಂಗೀತಾಳನ್ನು ಪಾಲಾನ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಲೇಶ್ ಮತ್ತು ಉಳಿದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ ಡಿಸ್ ಚಾರ್ಜ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಸೌರಾಷ್ಟ್ರದಲ್ಲೂ ದನದ ಕರುವಿನ ಶವ ವಿಲೇವಾರಿ ಮಾಡಲು ನಿರಾರಕಸಿದ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಲಾಗಿತ್ತು.

No Comments

Leave A Comment