Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಪತ್ನಿಗೆ ಭೂಮಿ ಮಂಜೂರು ಪ್ರಕರಣ: ಮಾಜಿ ಸಿಎಂ ಎಚ್ ಡಿಕೆಗೆ ಸಂಕಷ್ಟ

hdk-newಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕುಮಾರಸ್ವಾಮಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. .ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ, ಅಂದರೇ 2011 ರಲ್ಲಿ ಕೋ ಆಪರೇಟಿವ್ ಸೊಸೈಟಿಗೆ ಭೂಮಿ ಮಂಜೂರಾತಿ ಮಾಡಲಾಗಿತ್ತು.

ಈ ಸೊಸೈಟಿಯಲ್ಲಿ ಅನಿತಾ ಕುಮಾರಸ್ವಾಮಿ ಸದಸ್ಯೆಯಾಗಿದ್ದರು. ಅಲ್ಲದೆ ಅನಿತಾ ಅವರ ಆಸ್ತಿಯಲ್ಲಿ ಏರಿಕೆಯಾಗಿತ್ತು. ಆ ಅವಧಿಯಲ್ಲಾದ ಆಸ್ತಿ ಏರಿಕೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಹೇಳಲಾಗಿದೆ.

ರಾಜ್ಯ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿತ್ತು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದ್ದರ ಹಿನ್ನೆಲೆಯಲ್ಲಿ ಕುಮಾರ ಸ್ವಾಮಿ ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ.

No Comments

Leave A Comment