Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

shuttle_badmintonಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಎಂ.ಜಿ.ಎಂ. ಕಾಲೇಜಿನ ಇನ್‌ಡೋರ್ ಸ್ಟೇಡಿಯಂನಲ್ಲಿ ನಡೆಯಿತು.

ಉಡುಪಿ ಜಿಲ್ಲಾ ಶಟಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಕಾರ್ಯದರ್ಶಿ ವೈ. ಸುಧೀರ್ ಉದ್ಘಾಟಿಸಿದರು. ಎಂ.ಜಿ.ಎಂ. ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಮಾಲತಿದೇವಿ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಬಿ.ನಾಯಕ್, ಸಂಯೋಜನಾಧಿಕಾರಿ ಶ್ರೀಧರ್ ಶೆಟ್ಟಿ ಕೊಕ್ಕರ್ಣೆ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶರತ್ ಭಟ್ ಉಪಸ್ಥಿತರಿದ್ದರು.

ಎಂ.ಜಿ.ಎಂ. ಪ.ಪೂ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಾನಾಡಿ ಸತೀಶ್ ಕುಮಾರ್ ಹೆಗ್ಡೆ ಸ್ವಾಗತಿಸಿ, ಉಪನ್ಯಾಸಕ ಪದ್ಮನಾಭ್ ವಂದಿಸಿದರು. ಉಪನ್ಯಾಸಕಿ ರೋಹಿಣಿ ನಿರೂಪಿಸಿದರು.

No Comments

Leave A Comment