Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಕಾವೇರಿ ವಿವಾದ; ಕರ್ನಾಟಕಕ್ಕೆ ಮತ್ತೆ ಸುಪ್ರೀಂ ಬರೆ- ಪ್ರಧಾನಿ ಮಧ್ಯಪ್ರವೇಶಿಸಲಿ;ಕೈ ಸಂಸದರ ಧರಣಿ

parliನವದೆಹಲಿ:ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಸಂಸದರು ಮಂಗಳವಾರ ಸಂಸತ್ ಭವನದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು.

ಹಿರಿಯ ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಆಸ್ಕರ್ ಫರ್ನಾಂಡಿಸ್, ಬಿಕೆ ಹರಿಪ್ರಸಾದ್, ಕೆಎಚ್ ಮುನಿಯಪ್ಪ ಸೇರಿದಂತೆ ಕಾಂಗ್ರೆಸ್ ಸಂಸದರು ಧರಣಿ ನಡೆಸಿ, ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿದರು.

ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಸಂಕಷ್ಟ ಸ್ಥಿತಿ ಎದುರಾಗಿದ್ದು, ಪ್ರಧಾನಿ ಮೋದಿ ಅವರು ಬಗೆಹರಿಸಬೇಕೆಂದು ಹೇಳಿದರು.

No Comments

Leave A Comment