Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ನಾಳೆವರೆಗೂ ತಮಿಳುನಾಡಿಗೆ ನೀರು ಬಿಡಬೇಡಿ;ಸಭೇಲಿ BJP, JDS ಸಲಹೆ

sarvapakshaಬೆಂಗಳೂರು: ಯಾವುದೇ ಕಾರಣಕ್ಕೂನಾಳೆವರೆಗೆ ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಬುಧವಾರ ವಿಧಾನಸೌಧದಲ್ಲಿ ನಡೆಯುತ್ತಿರುವ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಸಲಹೆ ನೀಡಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ.

ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಪ್ರತಿದಿನ 6ಸಾವಿರ ಕ್ಯೂಸೆಕ್ ನೀರನ್ನು ಬಿಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ನೀಡಿರುವ ಆದೇಶದ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ನಡೆಸುತ್ತಿದ್ದಾರೆ.

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡೋದು ಬೇಡ. ವಿಧಾನಮಂಡಲದ ನಿರ್ಣಯಕ್ಕೆ ಬದ್ಧರಾಗಿರುವಂತೆ ವಿಪಕ್ಷಗಳು ಸಲಹೆ ನೀಡಿವೆ. ಆದರೆ ಸರ್ವಪಕ್ಷ ಸಭೆಯಲ್ಲಿನ ಸಲಹೆ ನಂತರ ಮಂತ್ರಿಪರಿಷತ್ ನಲ್ಲಿ ಚರ್ಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment