Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಸಾರ್ವಜನಿಕ ಶಿಕ್ಷಣ ಇಲಾಖಾ ಜಿಲ್ಲಾ ಉತ್ತಮ ಆಡಳಿತ ನೌಕರ ಪ್ರಶಸ್ತಿ-2016ಪ್ರದಾನ

lipika_sanmanaಕಾರ್ಕಳ: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖಾ ಲಿಪಿಕ ನೌಕರರ, ವಾಹನ ಚಾಲಕರ ಹಾಗೂ ಗ್ರೂಪ್ ಡಿ ನೌಕರರ ಸಂಘ (ರಿ.) ಇದರ ಉಡುಪಿ ಜಿಲ್ಲಾ ಶಾಖೆ ವತಿಯಿಂದ, ಕಾರ್ಕಳ ವಲಯ ಸಂಘದ ಸಹಭಾಗಿತ್ವದಲ್ಲಿ, ೨೦೧೫-೧೬ನೇ ಸಾಲಿನ ಮಹಾಸಭೆ ಕಾರ್ಕಳ ವಲಯದ ಸರ್ಕಾರಿ ಪ್ರೌಢ ಶಾಲೆ ಪೆರ್ವಾಜೆ ಇಲ್ಲಿ ಇತ್ತೀಚೆಗೆ ಜರಗಿತು.

ಶ್ರೀ ವಿನಾಯಕ ಕ್ಯಾಶ್ಯೂ ಇಂಡಸ್ಟ್ರೀಸ್ ಬೆಳ್ವೆ ಇದರ ಮಾಲಕ ಗಣೇಶ ಕಿಣಿ ಇವರ ಪ್ರಾಯೋಜಕತ್ವದಲ್ಲಿ, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರ ಕಛೇರಿಯ ಹಿರಿಯ ಪ್ರಥಮ ದರ್ಜೆ ಸಹಾಯಕ ಶಿವಾನಂದ ಯು. ಇವರನ್ನು ದಿ.ಬೆಳ್ವೆ ಮಂಜುನಾಥ ಕಿಣಿ ಸ್ಮರಣಾರ್ಥ ಸಾರ್ವಜನಿಕ ಶಿಕ್ಷಣ ಇಲಾಖಾ ಜಿಲ್ಲಾ ಉತ್ತಮ ಆಡಳಿತ ನೌಕರ ಪ್ರಶಸ್ತಿ-೨೦೧೬ ನೀಡಿ ಗೌರವಿಸಲಾಯಿತು.

ಸಂಘದ ಶ್ರೇಯೋಭಿವೃದ್ಧಿಗಾಗಿ ದುಡಿದ ಸಂಘದ ಹಿರಿಯ ನೌಕರ, ಸರಕಾರಿ ಪ್ರೌಢ ಶಾಲೆ (ಉರ್ದು) ಮಲ್ಲಾರು ಇಲ್ಲಿನ ಪ್ರಥಮ ದರ್ಜೆ ಸಹಾಯಕ ರಾಮ ಕೆ. ಇವರಿಗೆ ಸಾಧಕ ನೌಕರ ಪುರಸ್ಕಾರ ನೀಡಿ ಗೌರವಿಲಾಯಿತು. ನಿವೃತ್ತ ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ವಸಂತ ಶೆಟ್ಟಿ ಎಸ್., ಹಿಂದಿನ ಸಾಲಿನಲ್ಲಿ ನಿವೃತ್ತರಾದ ಸಂಘದ ಸದಸ್ಯರು, ರಾಜ್ಯ ಸಂಘದ ಪದಾಧಿಕಾರಿಗಳು ಮತ್ತು ಸಾಧಕ ಶಿಕ್ಷಕರಾದ ರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುಲ್ಕೇರಿಯ ಮುಖ್ಯ ಶಿಕ್ಷಕ ಶ್ರೀಧರ ಸುವರ್ಣ, ಸರ್ಕಾರಿ ಪ್ರೌಢ ಶಾಲೆ ಕುಚ್ಚೂರು ಇಲ್ಲಿನ ಮುಖ್ಯ ಶಿಕ್ಷಕಿ ಶ್ರೀಮತಿ ಸ್ನೇಹಲತಾ, ಮೂಡಬಿದ್ರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕ ಮನೋಹರ ಕಾಮತ್ ಆರ್, ಕಾರ್ಕಳ ವಲಯ ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಹೆಗ್ಡೆ ಇವರನ್ನು ಸನ್ಮಾನಿಸಲಾಯಿತು.

ಶೈಕ್ಷಣಿಕವಾಗಿ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು. ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದು, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಕೃಷ್ಣಮೂರ್ತಿ ನಾಯಕ್ ಇವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ರಾಜ್ಯ ಸಂಘದ ಗೌರವಾಧ್ಯಕ್ಷ ಟಿ.ಸಿ ಚಂದ್ರಶೇಖರ್, ರಾಜ್ಯಾಧ್ಯಕ್ಷ ಜೆ ಮಂಚೇಗೌಡ, ರಾಜ್ಯ ಸಂಘದ ಪದಾಧಿಕಾರಿಗಳು, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ದಿವಾಕರ ಶೆಟ್ಟಿ ಎಚ್. , ಹೆಬ್ರಿಯ ಎಸ್.ಆರ್ ಸಮೂಹ ವಿದ್ಯಾ ಸಂಸ್ಥೆಗಳ ನಿರ್ದೇಶಕ ನಾಗರಾಜ ಶೆಟ್ಟಿ, ಕಾರ್ಕಳ ವಲಯ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭಾಸ್ಕರ್, ಸರ್ಕಾರಿ ಪ್ರೌಢಶಾಲೆ ಪೆರ್ವಾಜೆಯ ಮುಖ್ಯ ಶಿಕ್ಷಕಿ ಶ್ರೀಮತಿ ಹರ್ಷಿಣಿ ಹೆಗ್ಡೆ, ಜಿಲ್ಲಾ ಸಂಘದ ಗೌರವಾಧ್ಯಕ್ಷ ಜಯಪ್ರಕಾಶ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಓಂಶ್ರೀ ರಾಘವೇಂದ್ರ ನಾಯಕ್, ಖಜಾಂಚಿ ವಿಜಯ್ ಕುಮಾರ್, ಕಾರ್ಕಳ ವಲಯ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಹಾಗೂ ಜಿಲ್ಲಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

No Comments

Leave A Comment