Log In
BREAKING NEWS >
ಡಿಸೆ೦ಬರ್ 23ರ೦ದು ಕಲ್ಯಾಣಪುರ ಜಿ ಎಸ್ ಬಿ ಸಭಾದ ಆಶ್ರಯದಲ್ಲಿ ದೇವಸ್ಥಾನದ ಬಳಿಯಲ್ಲಿರುವ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವು ಸಮಾಜ ಬಾ೦ಧವರಿಗಾಗಿ ಜರಗಲಿರುವುದಾಗಿ ಪ್ರಕಟಣೆ ತಿಳಿಸಿದೆ

ಸಿಐಡಿ ಬಿ ರಿಪೋರ್ಟ್ ಗೆ DYSP ಗಣಪತಿ ಪುತ್ರ ನೇಹಾಲ್ ಒಪ್ಪಿಗೆ

ganapati

ಮಡಿಕೇರಿ:ರಾಜ್ಯಾದ್ಯಂತ ರಾಜಕೀಯವಾಗಿ ಹಾಗೂ ಸಾರ್ವಜನಿಕವಾಗಿ ತೀವ್ರ ವಿವಾದಕ್ಕೊಳಗಾಗಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಸಲ್ಲಿಸಿದ್ದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ನೇಹಾಲ್ ಒಪ್ಪಿಗೆ ಸೂಚಿಸುವ ಮೂಲಕ ಪ್ರಕರಣ ಮುಕ್ತಾಯ ಕಂಡಂತಾಗಿದೆ.

ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿಲ್ಲ ಎಂದು ಮಾಧ್ಯಮದ ವರದಿ ತಿಳಿಸಿದೆ.

ಸೆಪ್ಟೆಂಬರ್ 17ರಂದು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ಅಧಿಕಾರಿಗಳು ಮಡಿಕೇರಿ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆ ಮೂಲಕ ಮಾಜಿ ಸಚಿವ ಕೆಜೆ ಜಾರ್ಜ್ ಹಾಗೂ ಇಬ್ಬರು ಅಧಿಕಾರಿಗಳಿಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಕೆಜೆ ಜಾರ್ಜ್ ಸಚಿವರಾಗಿ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದರು.

No Comments

Leave A Comment