Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ 72ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ತಜ್ಞರ ತಂಡ ಕಳುಹಿಸುವ ಕರ್ನಾಟಕದ ಸಲಹೆಗೆ ತಮಿಳುನಾಡು ಒಪ್ಪಿಲ್ಲ: ಉಮಾ ಭಾರತಿ

uma-bhartiನವದೆಹಲಿ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ನಾವು ಕರ್ನಾಟಕ ಮತ್ತು ತಮಿಳುನಾಡು ಸರ್ಕಾರದೊಂದಿಗೆ ಸಭೆ ನಡೆಸಿದ್ದು, ಕೋರ್ಟ್ ನಿಂದ ಹೊರಗಡೆ ಸಂಧಾನ ಪ್ರಯತ್ನ ನಡೆದಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ ಅವರು ಗುರುವಾರ ಹೇಳಿದ್ದಾರೆ.
ಉಭಯ ರಾಜ್ಯಗಳೊಂದಿಗೆ ಇಂದು ದೆಹಲಿಯ ಶ್ರಮಶಕ್ತಿ ಭವನದಲ್ಲಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಉಮಾ ಭಾರತಿ, ನೀರಿನ ವಿಷಯದಲ್ಲಿ ಯಾವುದೇ ರಾಜಕೀಯ ಮಾಡುವುದು ಬೇಡ. ಎರಡು ರಾಜ್ಯಗಳು ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಯಾವುದೇ ರಾಜ್ಯದಲ್ಲಿ ಅಹಿತಕರ ಘಟನೆ ನಡೆಯಬಾರದು. ಒಂದು ವೇಳೆ ಗಲಾಟೆ, ಹಿಂಸಾಚಾರ ನಡೆದರೆ ನಾನು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಎಚ್ಚರಿಸಿದರು. ಆದರೆ ಇದು ಬೆದರಿಕೆಯಲ್ಲಿ  ಮನವಿ ಅಷ್ಟೆ ಎಂದು ನಂತರ ಸ್ಪಷ್ಟಪಡಿಸಿದರು.
ಸಭೆಯಲ್ಲಿ ರಾಜ್ಯದ ಜಲಾಶಯಗಳಲ್ಲಿನ ನೀರಿನ ಪ್ರಮಾಣವನ್ನು ತಿಳಿಯಲು ತಜ್ಞರ ತಂಡ ಕುಳಹಿಸುವಂತೆ ಕರ್ನಾಟಕ ಸಲಹೆ ನೀಡಿತು. ಆದರೆ ಇದಕ್ಕೆ ತಮಿಳುನಾಡು ಒಪ್ಪಿಗೆ ನೀಡಿಲ್ಲ ಎಂದು ಉಮಾ ಭಾರತಿ ತಿಳಿಸಿದರು.
ಇದೇ ವೇಳೆ ಇಂದಿನ  ಸಭೆಯ ಎಲ್ಲಾ ವಿವವರಗಳನ್ನು ಅಟಾರ್ನಿ ಜನರಲ್ ಮೂಲಕ ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗುವುದು ಎಂದು ಕೇಂದ್ರ ಸಚಿವೆ ತಿಳಿಸಿದ್ದಾರೆ.
ಇನ್ನು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್ ಅವರು, ತಜ್ಞರ ತಂಡ ಕಳುಹಿಸುವಂತೆ ಕರ್ನಾಟಕ ಮನವಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇಂದು ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ನಾಳೆ ಸುಪ್ರೀಂ ಕೋರ್ಟ್ ಗೆ ತಿಳಿಸಲಿದೆ ಎಂದರು.
No Comments

Leave A Comment