Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಕಾವೇರಿ ವಿವಾದ: ಅಂತೂ ಮಧ್ಯ ಪ್ರವೇಶಿಸಿದ ಪ್ರಧಾನಿ; 7 ಆರ್ ಸಿಆರ್ ನಿವಾಸದಲ್ಲಿ ತುರ್ತು ಸಭೆ

modi-holdನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ತಾರಕಕ್ಕೇರಿರುವಂತೆಯೇ ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿದ್ದು, ಈ ಕುರಿತು ತುರ್ತು ಸಭೆ ನಡೆಸಿದ್ದಾರೆ.

ಶುಕ್ರವಾರದ ತೀರ್ಪಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬೆನ್ನಲ್ಲೇ ನಿನ್ನೆ ಸಂಜೆ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದ್ದು, ಸಭೆಯಲ್ಲಿ ಕೇಂದ್ರ ಸಚಿವರಾದ ರಾಜ್ ನಾಥ್ ಸಿಂಗ್, ಉಮಾಭಾರತಿ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ಈ ವೇಳೆ ನಿರ್ವಹಣಾ ಮಂಡಳಿ ರಚನೆ ಸಾಧಕ-ಬಾಧಕಗಳನ್ನು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯದ ಪ್ರಮುಖರ ಸಭೆಯ ವಿವರವನ್ನು ಮೋದಿ ಪಡೆದರು. ಇಷ್ಟೇ ಅಲ್ಲದೆ ಅಧಿಕಾರಿಗಳಿಂದ ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿ, ನೀರು ಸಂಗ್ರಹ, ಬೆಳೆ ಹಾಗೂ ಕಾನೂನು ಸುವ್ಯವಸ್ಥೆ ಸೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ವಿಸ್ತೃತವಾಗಿ ಚರ್ಚಿಸಿದ್ದಾರೆ.

ನ್ನು ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸುತ್ತಿದ್ದ ತಮಿಳುನಾಡು ಹಾಗೂ ಪುದುಚೇರಿ ಸರ್ಕಾರಗಳು ಮಂಡಳಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡಲು ಉತ್ಸುಕವಾಗಿದೆಯಾದರೂ, ಕರ್ನಾಟಕ ಹಾಗೂ ಕೇರಳ ರಾಜ್ಯಗಳು ಈ ಬಗ್ಗೆ ಈ ವರೆಗೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ನಿರ್ವಹಣಾ ಮಂಡಳಿ ರಚನೆಗೆ ಕರ್ನಾಟಕ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತ ಬಂದಿದ್ದು, ಮಂಡಳಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವುದು ಬಹುತೇಕ ಅನಿವಾರ್ಯವಾಗಿದೆ.

ಉಭಯ ರಾಜ್ಯಗಳಿಗೆ ತಂಡವನ್ನು ಕಳುಹಿಸಿ ಪರಿಸ್ಥಿತಿ ಅವಲೋಕಿಸಿ ತೀರ್ಪು ನೀಡುವಂತೆ ಮೊದಲಿನಿಂದಲೂ ಕರ್ನಾಟಕ ಕೋರುತ್ತಾ ಬಂದಿದ್ದು, ಇದಕ್ಕೆ ಸುಪ್ರೀಂ ಕೋರ್ಟ್ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿಲ್ಲವಾದರೂ ಮಂಡಳಿ ರಚನೆ ಬಳಿಕ ಅವರೇ ಅಧಿಕಾರಿಗಳ ತಂಡ ರಚಿಸಿ ಉಭಯ ರಾಜ್ಯಗಳಿಗೆ ಕಳುಹಿಸಿಕೊಡಲಿದೆ ಎಂದು ಹೇಳಿದೆ.

ಆ ಮೂಲಕ ಕರ್ನಾಟಕವನ್ನು ಸುಪ್ರೀಂ ಕೋರ್ಟ್ ಇಕ್ಕಟ್ಟಿಗೆ ಸಿಲುಕಿಸಿದ್ದು, ತಜ್ಞರನ್ನು ಕಳುಹಿಸಿಕೊಡುವ ಮನವಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಲು ಮಂಡಳಿ ರಚನೆಗೆ ಕರ್ನಾಟಕ ಒಪ್ಪಿಗೆ ನೀಡಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೀಗಾಗಿ ಪ್ರಸ್ತುತ ಕರ್ನಾಟಕ ಅಡಕತ್ತರಿಯಲ್ಲಿ ಸಿಲುಕಿದ್ದು, ಸರ್ಕಾರದ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ.

No Comments

Leave A Comment