Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಇರಾನಿ ನಕಲಿ ಪದವಿ ಪ್ರಮಾಣಪತ್ರ ವಿವಾದ: ಅ.6ಕ್ಕೆ ದೆಹಲಿ ಹೈಕೋರ್ಟ್ ಆದೇಶ

smrutiನವದೆಹಲಿ: ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿಯವರ ನಕಲಿ ಪದವಿ ಪ್ರಮಾಣ ಪತ್ರ ವಿವಾದ ಕುರಿತಂತೆ ದೆಹಲಿ ಹೈಕೊರ್ಟ್ ಅ.6 ರಂದು ಆದೇಶ ಹೊರಡಿಸಲಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ನಕಲಿ ಪ್ರಮಾಣ ಪತ್ರ ಕುರಿತಂತೆ ಸ್ಮೃತಿ ಇರಾನಿಯವರಿಗೆ ಸಮನ್ಸ್ ಜಾರಿ ಮಾಡಬೇಕೋ ಅಥವಾ ಬೇಡವೋ ಎಂಬುದರ ಕುರಿತಂತೆ ದೆಹಲಿ ಹೈಕೋರ್ಟ್ ಅ.6 ರಂದು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ನಕಲಿ ಪದವಿ ಪ್ರಮಾಣಪತ್ರ ಕುರಿತಂತೆ ಸೆಪ್ಟೆಂಬರ್ 3 ರಂದು ಅಹ್ಮದ್ ಖಾನ್ ಎಂಬುವವರು ಹೈಕೋರ್ಟ್ ನಲ್ಲಿ ದೂರು ಸಲ್ಲಿಸಿದ್ದರು, ಇದರಂತೆ ಅಹ್ಮದ್ ಖಾನ್ ಅವರ ಪರ ವಕೀಲ ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು.

2004 ಲೋಕಸಭಾ ಚುನಾವಣೆ ವೇಳೆ ಸ್ಮೃತಿ ಇರಾನಿಯವರು ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿ.ಎ ಪದವಿ ಪಡೆದಿರುವುದಾಗಿ ಶೈಕ್ಷಣಿಕ ಪದವಿ ಪ್ರಮಾಣವನ್ನು ಸಲ್ಲಿಸಿದ್ದರು.

ತದನಂತರ 2011ರಲ್ಲಿ ಗುಜರಾತ್ ನಿಂದ ರಾಜ್ಯಸಭಾ ಚುನಾವಣೆಗೆ ಅಫಿಡವಿಟ್ ಸಲ್ಲಿಸುವಾಗ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ಪದವಿ ಪಡೆದಿರುವುದಾಗಿ ಹೇಳಿಕೊಂಡಿದ್ದರು ಎಂದು ಹೇಳಿದ್ದರು.

No Comments

Leave A Comment