Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದ 118ನೇ ಭಜನಾ ಸಪ್ತಾಹದ ಆಮoತ್ರಣ ಪತ್ರಿಕೆ ಬಿಡುಗಡೆ-ಅಗಸ್ಟ್ 16ರಿ೦ದ ಭಜನಾ ಸಪ್ತಾಹ ಆರoಭ

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ

poonch-sectorಜಮ್ಮು: ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವುದಾಗಿ ಸೋಮವಾರ ತಿಳಿದುಬಂದಿದೆ.

ಪೂಂಚ್ ಜಿಲ್ಲೆಯ ಶಾಹ್ಪುರ್ ಸೆಕ್ಟರ್ ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.ಕಳೆದ 16 ಗಂಟೆಗಳಲ್ಲಿ ಪಾಕಿಸ್ತಾನ 3 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯ ಬಳಿ ಪಾಕಿಸ್ತಾನ ಒಟ್ಟಾರೆ 8 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ.

ಸೀಮಿತ ದಾಳಿ ಬಳಿಕ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನ ಸತತ ಯತ್ನ ನಡೆಸುತ್ತಿದ್ದು, ಗಡಿ ನುಸುಳಲು ಹಲವು ಪ್ರಯತ್ನಗಳನ್ನು ನಡೆಸುತ್ತಿದೆ.

ಪೂಂಚ್ ಸೆಕ್ಟರ್ ನಲ್ಲಿ ಒಂದೆಡೆ ಸೇನೆಯ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದರೆ, ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರದ ಪಲ್ಲಾನ್ವಾಲಾ ಒಲ್ಒಸಿಯಲ್ಲಿಯೂ ಸೇನೆಯ ಮೇಲೆ ಶೆಲ್ ದಾಳಿಗಳನ್ನು ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

No Comments

Leave A Comment