Log In
BREAKING NEWS >
ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಜಾಮೀನು....

ತಮಿಳುನಾಡಿಗೆ ನೀರು ಬಿಡೋದು ಅನಿವಾರ್ಯ; ಸಿಎಂ, ವಿಪಕ್ಷಗಳ ವಿರೋಧ

siddaramaಬೆಂಗಳೂರು: ಕಾವೇರಿ ವಿವಾದದ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲಿಸುವ ಅನಿರ್ವಾಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯವ್ಯಕ್ತಪಡಿಸುವ ಮೂಲಕ ಪರೋಕ್ಷವಾಗಿ ತಮಿಳುನಾಡಿಗೆ ನೀರು ಬಿಡುವ ಬಗ್ಗೆ ಮುನ್ಸೂಚನೆ ನೀಡಿದರು. ಆದರೆ ಸಿಎಂ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತೆ ಕರೆದಿದ್ದ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕಾವೇರಿ ವಿಚಾರವಾಗಿ ಚರ್ಚೆ ನಡೆಯಿತು. ಕಾವೇರಿ ವಿವಾದದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಬೆಂಬಲಕ್ಕೆ ಅಭಿನಂದನೆ ಸಲ್ಲಿಸಲಾಯಿತು.

ಬಳಿಕ 30 ನಿಮಿಷಗಳ ಕಾಲ ವಿಧಾನಸಭೆ ಕಲಾಪವನ್ನು ಸ್ಪೀಕರ್ ಕೆಬಿ ಕೋಳಿವಾಡ ಮುಂದೂಡಿದರು. ತದನಂತರ ಕಲಾಪ ಆರಂಭಗೊಂಡಾಂಗ ಸಿಎಂ ಸಿದ್ದರಾಮಯ್ಯ ಅವರು ಈ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

No Comments

Leave A Comment