Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ನಮ್ಮ ಆದೇಶ ನಿರಾಕರಿಸುವುದನ್ನು ನಿಲ್ಲಿಸಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಹೇಳಿಕೆ

supreme_courtನವದೆಹಲಿ: ಕಾವೇರಿ ವಿಚಾರವಾಗಿ ನಾವು ನೀಡುತ್ತಿರುವ ಆದೇಶಗಳನ್ನು ನಿರಾಕರಿಸುವುದನ್ನು ನಿಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಕಾವೇರಿ ವಿಚಾರ ಸಂಬಂಧ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸತತ ಆದೇಶದ ಹೊರತಾಗಿಯೂ ನ್ಯಾಯಾಲಯದ ಆದೇಶವನ್ನು ನಿರಾಕರಿಸುತ್ತಿರುವ ಕರ್ನಾಟಕದ ನಡೆ ವಿರುದ್ಧ  ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಲದೆ ತಮಿಳುನಾಡಿಗೆ ನೀರು ಬಿಡುವ ಕುರಿತು ಸೂಕ್ತ ತೀರ್ಮಾನ ಕೈಗೊಂಡು ನಾಳೆ ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ತಿಳಿಸುವಂತೆ ರಾಜ್ಯ  ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಇದೇ ವೇಳೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯವೆಂದು ಹೇಳಿರುವ ಕೇಂದ್ರ ಸರ್ಕಾರದ ಅರ್ಜಿ ಕೂಡ ಇಂದೇ ವಿಚಾರಣೆಗೆ ಬರುವ ಸಾಧ್ಯತೆ ಇದ್ದು, ಕಳೆದ ಸೆ.30ರಂದು  ನಿರ್ವಹಣಾ ಮಂಡಳಿ ರಚಿಸುವುದಾಗಿ ಹೇಳಿದ್ದ ಅಟಾರ್ನಿ ಜನರಲ್ ಮುಕಲ್ ರೋಹ್ಟಗಿ ಅವರು ಇಂದು ಕೇಂದ್ರ ಸರ್ಕಾರದ ಪರವಾಗಿ ಅಫಿಡವಿಟ್ ಸಲ್ಲಿಸಿದ್ದು, ಸುಪ್ರೀಂ ಆದೇಶದಂತೆ ನಿರ್ವಹಣಾ  ಮಂಡಳಿ ರಚನೆ ಸಾಧ್ಯವಿಲ್ಲ.

ನಿರ್ವಹಣಾ ಮಂಡಳಿ ರಚನೆ ಜವಾಬ್ದಾರಿ ಸಂಸತ್ತಿನ ಕರ್ತವ್ಯವಾಗಿದ್ದು, ಉಭಯ ಸದನಗಳ ಅನುಮೋದನೆ ಪಡೆದು ನಿರ್ವಹಣಾ ಮಂಡಳಿ ರಚಿಸಬೇಕಿದೆ ಎಂದು  ಹೇಳಿದೆ.

No Comments

Leave A Comment