Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ರಾಜ್ಯದ ಐದು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ!

disproportionateಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಐದು ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಶೋಧ  ನಡೆಸಿದ್ದಾರೆ.

ಬೆಂಗಳೂರು, ಚಿತ್ರದುರ್ಗ, ತುಮಕೂರು ಸೇರಿದಂತೆ ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಐದು ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ  ತೊಡಗಿದ್ದಾರೆ ಎಂದು ತಿಳಿದುಬಂದಿದೆ.

ಈ ಪೈಕಿ ಬೆಂಗಳೂರಿನ ಇಬ್ಬರು ಅಧಿಕಾರಿಗಳ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಉಳಿದಂತೆ ಚಿತ್ರದುರ್ಗ, ತುಮಕೂರು ಜಿಲ್ಲೆಯಲ್ಲಿಯೂ  ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.ಎಸಿಬಿ ಮೂಲಗಳು ತಿಳಿಸಿರುವಂತೆ ಬೆಂಗಳೂರಿನಲ್ಲಿರುವ ಬಿಬಿಎಂಪಿ ಆರೋಗ್ಯ ಅಧಿಕಾರಿ ಡಾ.ಕುಮಾರ್ ವೇಲು ಹಾಗೂ ಗ್ರೂಪ್ ಡಿ ನೌಕರ ಬಾಬು ಎಂಬುವವರ ಮನೆ ಹಾಗೂ ಕಚೇರಿಗಳ  ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಾಜಿನಗರದಲ್ಲಿರುವ ಬಾಬು ಮನೆಯಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು  ತಿಳಿದುಬಂದಿದೆ.

ಉಳಿದಂತೆ ಚಿತ್ರದುರ್ಗದ ಜಿಲ್ಲಾ ಮ್ಯಾನೇಜರ್ ಸಿಖಂದರ್, ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್ ಜಗನ್ನಾಥ್ ಹಾಗೂ ತುಮಕೂರಿನ ಜಂಟಿ ನಿರ್ದೇಶಕ ಸುಬ್ರಮಣ್ಯ  ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆದಾಳಿ ವೇಳೆ ಕಂಡುಬರುವ ಅಕ್ರಮ ಆಸ್ತಿಗಳಿಕೆ ಮಾಹಿತಿ ಕೆಲವೇ ಕ್ಷಣದಲ್ಲಿ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.

No Comments

Leave A Comment