Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ದಾಳಿ ಮಾಡಲು ಕಾದಿದ್ದಾರೆ 100ಕ್ಕೂ ಹೆಚ್ಚು ಉಗ್ರರು: ಕೇಂದ್ರ ಸಚಿವ ಸಂಪುಟಕ್ಕೆ ಅಜಿತ್ ಧೋವಲ್ ಮಾಹಿತಿ

modi-aನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಮೂಲದ 100ಕ್ಕೂ ಹೆಚ್ಚು ಉಗ್ರರು ಭಾರತದ ಮೇಲೆ ದಾಳಿ ಮಾಡಲು ಕಾದಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್  ಧೋವಲ್ ಅವರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಜಿತ್ ಧೋವಲ್ ಅವರು ಈ ಆಘಾತಕಾರಿ  ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ. ಉರಿ ಉಗ್ರ ದಾಳಿ ಬಳಿಕ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೀಮಿತ ದಾಳಿ ಬಳಿಕ ಗಡಿಯಲ್ಲಿ ಉಗ್ರಗಾಮಿ  ಚಟುವಟಿಕೆಗಳು ಹೆಚ್ಚಾಗಿದ್ದು, ಯಾವುದೇ ಸಂದರ್ಭದಲ್ಲಿ ಉಗ್ರರು ಭಾರತ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.ಸಭೆಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಜಿತ್ ಧೋವಲ್ ಸಂಪೂರ್ಣ ವಿವರಗಳನ್ನು ನೀಡಿದ್ದು, ಅಂತೆಯೇ ಉಗ್ರ ದಾಳಿ ಎದುರಿಸುವ ನಿಟ್ಟಿನಲ್ಲಿ ಭಾರತ ಕೈಗೊಳ್ಳಬೇಕಾಗ  ಕಾರ್ಯಗಳ ಕುರಿತೂ ಕೂಡ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಗಡಿ ನಿಯಂತ್ರಣ ರೇಖೆ ಬಳಿ ಅಪಾಯಕಾರಿಯಾಗಿ ಕಾಣುತ್ತಿರುವ 12ಕ್ಕೂ ಹೆಚ್ಚು ಉಗ್ರ ನೆಲೆಗಳ ಕುರಿತು  ಅಜಿತ್ ಧೋವಲ್ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.ಇನ್ನು ಇಂದಿನ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಇಲಾಖೆ, ರಕ್ಷಣಾ ಇಲಾಖೆ ಹಾಗೂ ವಿದೇಶಾಂಗ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಚಳಿಗಾಲದೊಳಗೆ ಮತ್ತಷ್ಟು ಸೀಮಿತ ದಾಳಿ ಸಾಧ್ಯತೆಉಗ್ರರ ವಿರುದ್ಧ ಯಾವುದೇ ರೀತಿಯ ಕಾರ್ಯಾಚರಣೆ ಕೈಗೊಂಡರೂ ಚಳಿಗಾಲದೊಳಗೆ ಕೈಗೊಳ್ಳುವಂತೆ ಕೇಂದ್ರ ಗುಪ್ತಚರ ಇಲಾಖೆ ಕೇಂದ್ರಕ್ಕೆ ಸಲಗೆ ನೀಡಿದೆ.

ಚಳಿಗಾಲದ ಸಂದರ್ಭದಲ್ಲಿ  ಗಡಿಯಲ್ಲಿ ದಟ್ಟ ಮಂಜು ಆವರಿಸುವುದರಿಂದ ಕಾರ್ಯಾಚರಣೆಗೆ ತೀವ್ರ ತೊಡಕಾಗಲಿದೆ. ಈ ವೇಳೆ ಉಗ್ರರು ಮಂಜಿನ ಬದಿಯಲ್ಲಿ ಸುಲಭವಾದಿ ತಪ್ಪಿಸಿಕೊಳ್ಳುತ್ತಾರೆ. ಹೀಗಾಗಿ ಚಳಿಗಾಲದೊಳಗೆ  ಕಾರ್ಯಾಚರಣೆ ನಡೆಸುವಂತೆ ಗುಪ್ತಚರ ಇಲಾಖೆ ಸಲಹೆ ನೀಡಿದೆ.ಈಗಾಗಲೇ ದಾಳಿ ಪ್ರಯತ್ನಗಳನ್ನು ಮುಂದುವರೆಸಿರುವ ಉಗ್ರರು ಇತ್ತೀಚೆಗೆ ಬಾರಾಮುಲ್ಲಾ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿ ಓರ್ವ ಸೈನಿಕನನ್ನು ಕೊಂದು ಹಾಕಿದ್ದರು.

No Comments

Leave A Comment