Log In
BREAKING NEWS >
ಜುಲೈ.5ಕ್ಕೆ 2018-19ನೇ ಸಾಲಿನ ರಾಜ್ಯ ಬಜೆಟ್ ಮಂಡನೆ: ಸಿಎಂ ಕುಮಾರಸ್ವಾಮಿ.....ಉಗ್ರರ ದಮನಕ್ಕೆ ಕಾಶ್ಮೀರ ಸಿದ್ಧ : ಕಾಶ್ಮೀರಕ್ಕೆ Snipers, NSG ರವಾನೆ

ಬಿಹಾರದಲ್ಲಿ ಐವರು ಶಂಕಿತ ಉಗ್ರರ ಬಂಧನ, ತೀವ್ರ ವಿಚಾರಣೆ

suspected-tಪಾಟ್ನಾ: ಅತ್ತ ಇಂಡೋ-ಪಾಕ್ ಗಡಿಯಲ್ಲಿ ಉಗ್ರರು ಭಾರತೀಯ ಸೈನಿಕರ ವಿರುದ್ಧ ದಾಳಿ ಮುಂದುವರೆಸಿರುವಂತೆಯೇ ಇತ್ತ ಬಿಹಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿರುವ ಎನ್  ಐಎ ಅಧಿಕಾರಿಗಳು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಭದ್ರತಾ ಮೂಲಗಳ ಪ್ರಕಾರ ಬಿಹಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನೇಪಾಳ ಮಾರ್ಗವಾಗಿ ಭಾರತದೊಳಗೆ ಈ ಐವರು ಶಂಕಿತ  ಉಗ್ರರು ನುಸುಳಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಐವರ ಪೈಕಿ ಇಬ್ಬರು ಪಾಕಿಸ್ತಾನ ಮೂಲದ ಶಂಕಿತರು ಎಂದು ಹೇಳಲಾಗುತ್ತಿದ್ದು, ಉಳಿದ ಮೂವರ ಗುರುತು  ಇನ್ನಷ್ಟೇ ಪತ್ತೆಯಾಗಬೇಕಿದೆ.ಪ್ರಸ್ತುತ ಬಂಧಿತ ಶಂಕಿತ ಉಗ್ರರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿರುವ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

No Comments

Leave A Comment