Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಉಪ್ಪೂರು ಮೋಹನ್ ರಾವ್ ನಿಧನ

u_mohan_raoಕರ್ಣಾಟಕ ಬ್ಯಾಂಕ್‌ನ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಉಪ್ಪೂರು ಮೋಹನ್ ರಾವ್ (70 ವರ್ಷ) ಅಕ್ಟೋಬರ್ 4, 2016 ರಂದು ಇಂದ್ರಾಳಿಯ ಸ್ವಗ್ರಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಉಡುಪಿ ರಂಗಭೂಮಿಯ ಜತೆಕಾರ್ಯದರ್ಶಿಯಾಗಿ ಹಾಗೂ ಪ್ರಮುಖ ನಟನಾಗಿ ಸೇವೆ ಸಲ್ಲಿಸಿದ್ದರು. ಉಪ್ಪೂರು ಬಿಲ್ಲ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಯಕ್ಷಗಾನ ಕಲಾರಂಗದ ಆಜೀವ ಸದಸ್ಯರು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ರಂಗಭೂಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಕೆ. ಗಣೇಶ್ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.

No Comments

Leave A Comment